ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ: ಜೂ.3ಕ್ಕೆ ನೈರುತ್ಯ ಶಿಕ್ಷಕರ, ಪದವೀಧರರ ಕ್ಷೇತ್ರಕ್ಕೆ ಚುನಾವಣೆ

ಕೊಡಗು ಜಿಲ್ಲೆಯಲ್ಲಿದ್ದಾರೆ 1,578 ಶಿಕ್ಷಕರು, 3,909 ಪದವೀಧರ ಮತದಾರರು
Published 2 ಜೂನ್ 2024, 14:36 IST
Last Updated 2 ಜೂನ್ 2024, 14:36 IST
ಅಕ್ಷರ ಗಾತ್ರ

ಮಡಿಕೇರಿ: ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗಾಗಿ ಅಂತಿಮ ಸಿದ್ಧತೆಗಳು ಪೂರ್ಣಗೊಂಡಿವೆ. ಜೂನ್ 3ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜಿಲ್ಲೆಯ 6 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ಒಟ್ಟು 1,578 ಮತದಾರರು ಇದ್ದು, ಇವರಲ್ಲಿ 543 ಪುರುಷರು ಮತ್ತು 1,035 ಮಹಿಳಾ ಮತದಾರರು ಇದ್ದಾರೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 234, ಕುಶಾಲನಗರ ತಾಲ್ಲೂಕಿನಲ್ಲಿ 337, ಮಡಿಕೇರಿ ತಾಲ್ಲೂಕಿನಲ್ಲಿ 441, ವಿರಾಜಪೇಟೆ ತಾಲ್ಲೂಕಿನಲ್ಲಿ 268 ಮತ್ತು ಪೊನ್ನಂಪೇಟೆ ತಾಲ್ಲೂಕಿನ 298 ಮಂದಿ ಮತದಾರರು ಇದ್ದಾರೆ.

ಇವರಿಗಾಗಿ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಚೇರಿ, ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಮಡಿಕೇರಿ ನಗರಸಭೆ ಸಭಾಂಗಣ (ಬಲಭಾಗ), ವಿರಾಜಪೇಟೆ ಪುರಸಭೆ ಕಚೇರಿ, ಪೊನ್ನಂಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ಒಟ್ಟು 3,909 ಮತದಾರರು ಇದ್ದು, ಇವರಲ್ಲಿ 1,699 ಪುರುಷ ಮತ್ತು 2,210 ಮಹಿಳಾ ಮತದಾರರು ಇದ್ದಾರೆ.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಒಟ್ಟು 811, ಕುಶಾಲನಗರ ತಾಲ್ಲೂಕಿನಲ್ಲಿ 795, ಮಡಿಕೇರಿ ತಾಲ್ಲೂಕಿನಲ್ಲಿ 1,143, ವಿರಾಜಪೇಟೆ ತಾಲ್ಲೂಕಿನಲ್ಲಿ 630 ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ 530 ಮಂದಿ ಮತದಾರರು ಇದ್ದಾರೆ.

ಇವರಿಗಾಗಿ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಚೇರಿ, ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಮಡಿಕೇರಿ ನಗರಸಭೆ ಸಭಾಂಗಣ (ಬಲಭಾಗ),  ನಗರಸಭೆ ಸಭಾಂಗಣ (ಎಡಭಾಗ), ವಿರಾಜಪೇಟೆ ಪುರಸಭೆ ಕಚೇರಿ ಹಾಗೂ ಪೊನ್ನಂಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳು ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳನ್ನು ಒಳಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT