ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಟ್ಟಳ್ಳಿ ರಸ್ತೆಗೆ ಉರುಳಿದ ವಿದ್ಯುತ್ ಕಂಬಗಳು

Published 8 ಜೂನ್ 2024, 7:50 IST
Last Updated 8 ಜೂನ್ 2024, 7:50 IST
ಅಕ್ಷರ ಗಾತ್ರ

ಸುಂಟಿಕೊಪ್ಪ: ಸಮೀಪದ ಗದ್ದೆಹಳ್ಳ ಶ್ರೀದೇವಿ ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು,  ವಿದ್ಯುತ್ ಕಂಬವೊಂದು ರಾಜ್ಯ ಹೆದ್ದಾರಿ ಚೆಟ್ಟಳ್ಳಿ ರಸ್ತೆ ಮೇಲೆ ಉರುಳಿತು.

ಇದರಿಂದ 3 ಕಂಬಗಳು ತಂತಿ ಸಮೇತ ರಸ್ತೆ ಬದಿಯಲ್ಲಿ ನೇತಾಡುತ್ತಿವೆ. ಅದೃಷ್ಟವಶಾತ್ ವಿದ್ಯುತ್ ಕಂಬಗಳು ಬೀಳುತ್ತಿದ್ದಂತೆಯೇ ತಕ್ಷಣ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದರಿಂದ ಹಾಗೂ ಈ ವೇಳೆ ವಾಹನಗಳು ರಸ್ತೆಯಲ್ಲಿ ಸಂಚರಿಸದೇ ಇದ್ದುದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ, ತುರ್ತಾಗಿ ವಾಹನದಲ್ಲಿ ತೆರಳಬೇಕಾದವರು ಪರ್ಯಾಯವಾಗಿ ಉಲುಗುಲಿ ತೋಟದ ಮೂಲಕ ಹಾದು ಚೆಟ್ಟಳ್ಳಿ ರಸ್ತೆಯನ್ನು ಸಂಪರ್ಕಿಸುವ ರಸ್ತೆಯ ಮೂಲಕ ಸಂಚರಿಸುವಂತಾಯಿತು. ಸ್ಥಳಕ್ಕೆ ಪೊಲೀಸರು, ಸಾರ್ವಜನಿಕರು, ಸೆಸ್ಕ್ ಇಲಾಖೆಯ ಸಿಬ್ಬಂದಿ ತೆರಳಿ ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT