ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕಿನ ನಾಗರಹೊಳೆ ಅರಣ್ಯದಂಚಿನ ಬೊಮ್ಮಾಡು ಗಿರಿಜನ ಹಾಡಿಗೆ ನೂತನವಾಗಿ ಕಲ್ಪಿಸಿದ ವಿದ್ಯುತ್ ಮಾರ್ಗವನ್ನು ಶಾಸಕ ಎ.ಎಸ್.ಪೊನ್ನಣ್ಣ ಈಚೆಗೆ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸೆಸ್ಕ್ ಇಲಾಖೆಯವರಿಗೆ ಸೂಚಿಸಿದರು.

ಚುನಾವಣೆ ಸಂದರ್ಭದಲ್ಲಿ ಬೊಮ್ಮಾಡು ಹಾಡಿಗೆ ವಿದ್ಯುತ್ ಸರಬರಾಜು ಕಲ್ಪಿಸಲಾಗುವುದು ಎಂದು ಹೇಳಲಾಗಿತ್ತು. ಇದೀಗ ಅದು ನೆರವೇರಿದೆ. ಯಾವುದೇ ಅಡೆ ತಡೆಗಳಿಲ್ಲದೆ ವಿದ್ಯುತ್ ಸರಬರಾಜು ಮಾಡಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಬಳಿಕ ಬೊಮ್ಮಾಡುವಿನ ಗಿರಿಜನ ಆಶ್ರಮ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಊಟ, ಉಪಹಾರ, ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಪರಿಶೀಲನೆ ನಡೆಸಿದರು. ಇದೇ ವೇಳೆಯಲ್ಲಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದಿರಿರ ನವೀನ್, ಕಾಂಗ್ರೆಸ್ ಮುಖಂಡರಾದ ಪಲ್ವಿನ್ ಪೂಣಚ್ಚ, ಚಿಮ್ಮಣಮಾಡ ರವಿ, ಕೆ.ಬಾಡಗ ಪಂಚಾಯಿತಿ ಸದಸ್ಯ ಸೋಮಯ್ಯ, ಸದಸ್ಯರಾದ ಲಕ್ಷ್ಮಿ, ಮುಕ್ಕಾಟೀರ ದೀಪಕ್, ವಿಶು, ನಾಲ್ಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ತೀತಿರ ಕಟ್ಟಿ ಕಾರ್ಯಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.