ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಡಾನೆ ದಾಳಿ: ಮನೆಗೆ ಹಾನಿ

Published 25 ಜೂನ್ 2024, 4:50 IST
Last Updated 25 ಜೂನ್ 2024, 4:50 IST
ಅಕ್ಷರ ಗಾತ್ರ

ಸಿದ್ದಾಪುರ: ಕಾಡಾನೆ ದಾಳಿಗೆ ಮನೆಯ ಚಾವಣಿ ಸೇರಿದಂತೆ ಸಾಮಗ್ರಿಗಳು ಹಾನಿಗೊಳಗಾದ ಘಟನೆ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಡಿಯಲ್ಲಿ ನಡೆದಿದೆ.

ಶನಿವಾರ ತಡರಾತ್ರಿ ಬರಡಿ ನಿವಾಸಿ ರಾಶಿದಾ ಅವರ ಮನೆಯ ಹಿಂಭಾಗ ಕಾಣಿಸಿಕೊಂಡ ಕಾಡಾನೆಯು ಸ್ಥಳದಲ್ಲಿದ್ದ ಬಾಳೆಗಿಡಗಳನ್ನು ನಾಶಮಾಡಿದೆ. ಅಲ್ಲದೇ ಮನೆಯ ಹಿಂಭಾಗದಲ್ಲಿ ಕೋಣೆಯ ಚಾವಣಿಯನ್ನು ಹಾನಿಗೊಳಿಸಿದೆ.

ಸ್ಥಳಕ್ಕೆ ಕುಶಾಲನಗರ ಉಪ ವಲಯ ಅರಣ್ಯಾಧಿಕಾರಿ ಸುಬ್ರಾಯ ಭೇಟಿ‌ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT