ಮಂಗಳವಾರ, ಜೂನ್ 22, 2021
27 °C

ಕಾಡಾನೆ ದಾಳಿ: ಕಾರ್ಮಿಕ ಸಾವು

 ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿದ್ದಾಪುರ (ಕೊಡಗು): ವಾಲ್ನೂರು ಗ್ರಾಮದ ಅಮ್ಮಂಗಾಲದಲ್ಲಿ ಸೋಮವಾರ ಕಾಡಾನೆ ದಾಳಿಯಿಂದ ಪ್ರಭು ಗಣಪತಿ ಅವರ ಕಾಫಿ ತೋಟದ ಲೈನ್‌ಮನೆಯಲ್ಲಿ ವಾಸವಿದ್ದ ಕಾರ್ಮಿಕ ಏಳುಮಲೈ (42) ಮೃತಪಟ್ಟಿದ್ದಾರೆ.

ಬೆಳಗ್ಗಿನ ಜಾವ ಕಾವೇರಿ ನದಿಯ ಬಳಿ ನಡೆದು ತೆರಳುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಏಳುಮಲೈ ಅವರ ಹೊಟ್ಟೆಯ ಭಾಗಕ್ಕೆ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟರು.

ಸ್ಥಳಕ್ಕೆ ಮಡಿಕೇರಿ ವಿಭಾಗದ ಡಿ.ಎಫ್.ಒ ಪ್ರಭಾಕರನ್, ಎ.ಸಿ.ಎಫ್ ನೆಹರು, ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್, ಉಪವಲಯ ಅರಣ್ಯಾಧಿಕಾರಿ ಸುಬ್ರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು