ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಡಾನೆ ದಾಳಿ; ಮಹಿಳೆ ಸಾವು

Published 9 ಜುಲೈ 2024, 6:09 IST
Last Updated 9 ಜುಲೈ 2024, 6:09 IST
ಅಕ್ಷರ ಗಾತ್ರ

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಚೆನ್ನಂಗಿ ಬಳಿಯ ಅಬ್ಬೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂನ ಅಜಬಾನು (37) ಎಂಬುವವರು ಬುಧವಾರ ಮಧ್ಯಾಹ್ನ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟರು.

‘ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಪಾಲಿಬೆಟ್ಟದ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ನಾಗರಹೊಳೆ ಅರಣ್ಯ ಇಲ್ಲಿಗೆ ಕೇವಲ 2 ಕಿ.ಮೀ ಇದೆ. ಅಲ್ಲಿಂದ ಬಂದಿರುವ ಆನೆಯನ್ನು ನಿರಂತರವಾಗಿ ಕಾಡಿಗೆ ಓಡಿಸಿದರೂ ಮತ್ತೆಮತ್ತೆ ವಾಪಸ್ ಬರುತ್ತಿದೆ’ ಎಂದು ವಿರಾಜಪೇಟೆ ವಲಯದ ಡಿಸಿಎಫ್ ಶರಣ ಬಸಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ಆಸ್ಪತ್ರೆ ಮುಂದೆ ಜಮಾಯಿಸಿದ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT