ಮಂಗಳವಾರ, ಸೆಪ್ಟೆಂಬರ್ 21, 2021
21 °C

ಸೋಲಾರ್ ತಂತಿಗೆ ಸಿಲುಕಿ ಕಾಡಾನೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೋಮವಾರಪೇಟೆ: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಯೂರು-ನೇಗಳ್ಳೆ ಗ್ರಾಮದಲ್ಲಿ ಶನಿವಾರ ರಾತ್ರಿ ಸೋಲಾರ್ ತಂತಿಗೆ ಸಿಲುಕಿ ಕಾಡಾನೆ ಮರಿ ಮೃತಪಟ್ಟಿದೆ.

ಪೂವಯ್ಯ ಎಂಬುವವರ ತೋಟದಲ್ಲಿ ಕಾಡಾನೆ ಕಳೇಬರ ಪತ್ತೆಯಾಗಿದೆ.

ನೇಗಳ್ಳೆ ಅವಿನಾಶ್ ಎಂಬುವವರು ಪೂವಯ್ಯ ಅವರ ಜಾಗದಲ್ಲಿ ಶುಂಠಿ ಕೃಷಿ ಮಾಡಿದ್ದರು. ಕಾಡಾನೆಗಳ ಹಾವಳಿ ತಪ್ಪಿಸಲು ಸ್ವಂತವಾಗಿ ಸೋಲಾರ್ ತಂತಿ ಬೇಲಿ ಅಳವಡಿಸಿದ್ದರು. ಯಡವನಾಡು ಮೀಸಲು ಅರಣ್ಯದಿಂದ ಕಾಡಾನೆ ಹಿಂಡು, ತಂತಿ ದಾಟುವ ವೇಳೆ ಮರಿಯ ಸೊಂಡಲಿಗೆ ತಂತಿ ತಾಗಿದೆ ಎಂಬುದು ಗೊತ್ತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು