ಕಾಫಿ ತೋಟದಲ್ಲಿ ಆನೆ ಸಾವು

ಗೋಣಿಕೊಪ್ಪಲು: ಕುಟ್ಟ ಬಳಿಯ ಪೂಜಿಕಲ್ಲು ವಿನ ಕಾಕೇರ ಕಾಳಪ್ಪ ಅವರ ಕಾಫಿ ತೋಟದಲ್ಲಿ ಅಂದಾಜು 15 ವರ್ಷ ಪ್ರಾಯದ ಗಂಡಾನೆ ಮೃತಪಟ್ಟಿದ್ದು, ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.
ಆನೆಯ ಮೈಮೇಲೆ ಯಾವುದೇ ಗಾಯದ ಗುರುತುಗಳು ಕಂಡು ಬಂದಿಲ್ಲ. ಶನಿವಾರ ರಾತ್ರಿ ಮೃತಪಟ್ಟಿರಬಹುದು. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ಕಾರಣ ತಿಳಿಯಲಿದೆ ಎಂದು ಶ್ರೀಮಂಗಲ ವಲಯ ಅರಣ್ಯಾಧಿಕಾರಿ ವೀರೇಂದ್ರ ತಿಳಿಸಿದರು.
ತಿತಿಮತಿ ಎಸಿಎಫ್ ಉತ್ತಪ್ಪ, ಡಿಆರ್‌ಎಫ್ಒ ಬೋಪಣ್ಣ, ಅರಣ್ಯ ರಕ್ಷಕ ರಾಜೇಶ್ ಹಾಗೂ ಸಿಬ್ಬಂದಿ ವರ್ಗದವರು ಭೇಟಿ ನೀಡಿ ಆನೆಯ ಶವ ಸಂಸ್ಕಾರ ನೆರವೇರಿಸಿದರು. ಪಶು ವೈದ್ಯಾಧಿಕಾರಿ ಚಂದ್ರಶೇಖರ್ ಅವರು ಮರಣೋತ್ತರ ಪರೀಕ್ಷೆ ನಡೆಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.