ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರಪೇಟೆ: ಕಾಡಿಗೆ ಓಡಿಸುವಾಗ ರಸ್ತೆಗೆ ಬಂದ ಕಾಡಾನೆ

Published 2 ಏಪ್ರಿಲ್ 2024, 5:09 IST
Last Updated 2 ಏಪ್ರಿಲ್ 2024, 5:09 IST
ಅಕ್ಷರ ಗಾತ್ರ

ಸೋಮವಾರಪೇಟೆ: ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಜಂಕ್ಷನ್ ಬಳಿ ಎರಡು ಕಾಡಾನೆಗಳು ಹಗಲಿನಲ್ಲಿ ಸಂಚರಿಸುತ್ತಿರುವ ವಿಡಿಯೊ ವಾಟ್ಸ್‌ಆ್ಯಪ್‌ಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಈ ಕುರಿತು ‘ಪ್ರಜಾವಾಣಿ’ ವಲಯ ಅರಣ್ಯಾಧಿಕಾರಿ ಚೇತನ್ ಅವರನ್ನು ಸಂಪರ್ಕಿಸಿದಾಗ ಅವರು, ಇದು ಕಾಡಾನೆ ಓಡಿಸುವಾಗ ಭಾನುವಾರ ನಡೆದ ಘಟನೆ ಎಂದು ಸ್ಪಷ್ಟಪಡಿಸಿದರು.

‘ಅರಣ್ಯ ಇಲಾಖೆ ಸಿಬ್ಬಂದಿ ತೋಟಗಳಿಗೆ ನುಗ್ಗಿದ್ದ ಕಾಡಾನೆಗಳನ್ನು ಓಡಿಸುವಾಗ ಅವು ರಸ್ತೆಯನ್ನು ಹಾದು ಹೋದವು. ನಮ್ಮ ಸಿಬ್ಬಂದಿ ಕಾಡಾನೆಗಳಿಗೆ ಸ್ಪಲ್ಪ ದೂರದಲ್ಲೇ ಇದ್ದರು. ಈ ವೇಳೆ ವಾಹನ ಸಂಚಾರವನ್ನು ತಡೆ ಹಿಡಿಯಲಾಗಿತ್ತು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT