ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಪೋಕ್ಲು | ಎಮ್ಮೆಮಾಡು ಉರುಸ್: ವಾಹನ ನಿಲುಗಡೆ ನಿಷೇಧ 

Published 29 ಏಪ್ರಿಲ್ 2024, 4:04 IST
Last Updated 29 ಏಪ್ರಿಲ್ 2024, 4:04 IST
ಅಕ್ಷರ ಗಾತ್ರ

ನಾಪೋಕ್ಲು: ಎಮ್ಮೆಮಾಡು ಮಖಾಂ ಉರುಸ್ ಪ್ರಯುಕ್ತ ಏಪ್ರಿಲ್ ಇಂದು (29ರಂದು) ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

‌ಪ್ರತಿ ವರ್ಷದಂತೆ ನಡೆಯುವ ಎಮ್ಮೆಮಾಡು ಮಖಾಂ ಉರುಸ್‌ಗೆ ರಾಜ್ಯ, ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಾವಿರಾರು ಭಕ್ತರು ವಾಹನಗಳಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಸೋಮವಾರ ನಾಪೋಕ್ಲು ಸಂತೆ ದಿನ ಕೂಡ ಆಗಿರುವುದರಿಂದ ನಾಪೋಕ್ಲು ಪಟ್ಟಣದಲ್ಲಿ ವಾಹನದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನು ನಿಯಂತ್ರಣಕ್ಕೆ ತರಲು ಸಾರ್ವಜನಿಕರು ಸಹಕಾರ ನೀಡಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

ನೆಲಜಿ, ಬಲ್ಲಮಾವಟಿ, ಕಕ್ಕಬ್ಬೆ ಭಾಗದಿಂದ ನಾಪೋಕ್ಲು ಪಟ್ಟಣಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಹಳೇ ತಾಲ್ಲೂಕು ಸರ್ಕಾರಿ ಶಾಲಾ ಮೈದಾನದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಬೇತು ರಸ್ತೆ, ಪೊಲೀಸ್ ಠಾಣಾ ಮೈದಾನ, ನಾಡಕಚೇರಿ ಆವರಣ, ಚೆರಿಯಪರಂಬು ರಸ್ತೆಯಲ್ಲಿ ಇತರೆ ಕಡೆಯಿಂದ ಬರುವ ಸಾರ್ವಜನಿಕರ ವಾಹನ ನಿಲುಗಡೆ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಸಹಕಾರ ನೀಡುವಂತೆ ನಾಪೋಕ್ಲು ಪೊಲೀಸ್ ಠಾಣೆಯ ಪ್ರಕಟಣೆಯಲ್ಲಿ ಕೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT