ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಭಿನ್ನ ಅನುಭವ ನೀಡಿದ ಕೊಡಗಿನ ಸೇವೆ’

ಜಿಲ್ಲಾ ಪಂಚಾಯಿತಿ ಸಿಇಒಗೆ ಸ್ವಾಗತ, ಎಸಿಯಾಗಿದ್ದ ಟಿ.ಜವರೇಗೌಡ ಅವರಿಗೆ ಬೀಳ್ಕೊಡುಗೆ 
Last Updated 26 ಆಗಸ್ಟ್ 2020, 12:38 IST
ಅಕ್ಷರ ಗಾತ್ರ

ಮಡಿಕೇರಿ: ಜಿಲ್ಲೆಯಲ್ಲಿ ಎರಡು ವರ್ಷಗಳ ಕಾಲ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡಿರುವ ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರಿಗೆ ಬುಧವಾರ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು.

ಜಿ.ಪಂ ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ಭನ್ವರ್ ಸಿಂಗ್ ಮೀನಾ ಹಾಗೂ ಉಪ ವಿಭಾಗಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಈಶ್ವರ್ ಕುಮಾರ್ ಕಂಡು ಅವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಜಿ.ಪಂ ಭವನದಲ್ಲಿ ಟಿ.ಜವರೇಗೌಡ ಅವರಿಗೆ ಶಾಲು ಫಲ ತಾಂಬೂಲ ನೀಡಿ ಇದೇ ವೇಳೆ ಗೌರವಿಸಲಾಯಿತು.

ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ಟಿ.ಜವರೇಗೌಡ ಅವರು, ‘ಬಯಲು ಸೀಮೆ ಹಾಗೂ ಕೊಡಗು ಜಿಲ್ಲೆಯಲ್ಲಿ ಕೆಲಸ ಮಾಡುವುದು ವಿಭಿನ್ನ ಅನುಭವ ನೀಡಿದೆ. ಜಿಲ್ಲಾಧಿಕಾರಿ ಅವರ ಸಲಹೆ, ಮಾರ್ಗದರ್ಶನ ಮತ್ತು ಪ್ರೋತ್ಸಾಹದಿಂದ ಸಾರ್ವಜನಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಯಿತು. ನನ್ನ ಯಶಸ್ಸಿನ ಹಿಂದೆ ಜಿಲ್ಲಾಧಿಕಾರಿ ಅವರ ಪಾತ್ರ ಹೆಚ್ಚಿದೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಅವರು ಎಲ್ಲ ಹಂತದ ಅಧಿಕಾರಿಗಳಿಂದ ವಿಶ್ವಾಸದಿಂದ ಕೆಲಸ ಮಾಡಿಸುತ್ತಿದ್ದರು. ಇದನ್ನು ಮೆಚ್ಚಲೇಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವುದು ಚಿಕ್ಕ-ಚೊಕ್ಕ ಕುಟುಂಬವಿದ್ದಂತೆ. ಸಹೋದರತೆ, ಆತ್ಮೀಯತೆಯಿಂದ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬಹುದು. ಪ್ರಕೃತಿ ವಿಕೋಪ, ಕೋವಿಡ್-19, ಚುನಾವಣೆ... ಹೀಗೆ ಎಲ್ಲಾ ಸಂದರ್ಭದಲ್ಲಿ ಅಧಿಕಾರಿಗಳು ಒಟ್ಟುಗೂಡಿ ಒಂದು ಮನೆಯ ಸದಸ್ಯರಂತೆ ಕರ್ತವ್ಯ ನಿರ್ವಹಿಸುತ್ತಿದ್ದೆವು ಎಂದು ಹೇಳಿದರು.

2018ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ 683 ಕುಟುಂಬಗಳಿಗೆ ಮನೆ ಹಂಚಿಕೆ ಮಾಡಿದ್ದು ವಿಶೇಷ ಎಂದು ಅವರು ತಿಳಿಸಿದರು.

ಆಗುವುದೆಲ್ಲಾ ಒಳ್ಳೆಯದಕ್ಕೆ ಆಗುತ್ತಿದೆ. ಆಗಲಿರುವುದು ಒಳ್ಳೆಯದೇ ಆಗಲಿದೆ ಎಂದು ಟಿ.ಜವರೇಗೌಡ ಅವರು ವರ್ಣಿಸಿದರು.

ಜಿ.ಪಂ ನೂತನ ಸಿಇಒ ಭನ್ವರ್ ಸಿಂಗ್ ಮೀನಾ ಅವರು, ಬೆಳಗಾವಿ ಜಿಲ್ಲೆಯಲ್ಲಿ ಪ್ರೊಬೆಷನರಿ ಹಾಗೂ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 10 ತಿಂಗಳ ಕಾಲ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ತಿಳಿಸಿದರು.
ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಕಂಡು ಅವರು ಸಾರ್ವಜನಿಕ ಸೇವೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಹೋಗಬೇಕಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹೇಳಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಟಿ.ಜವರೇಗೌಡ ಅವರಿಗೆ 1 ವರ್ಷದ ಹಿಂದೆಯೇ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಬಡ್ತಿಯಾಗಿತ್ತು. ಆದರೆ, ಜಿಲ್ಲೆಯಲ್ಲಿನ ಪ್ರಕೃತಿ ವಿಕೋಪ ಸೇರಿದಂತೆ ವಿವಿಧ ಕಾರ್ಯಗಳಿಗಾಗಿ ಮತ್ತು ಪುನರ್ವಸತಿ ವಿಭಾಗದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಹೇಳಿದರು.
ಕೊರೊನಾ ಸಂದರ್ಭ ಹೊರ ರಾಜ್ಯದ ಕಾರ್ಮಿಕರನ್ನು ಸ್ವಂತ ರಾಜ್ಯಗಳಿಗೆ ಕಳುಹಿಸಿಕೊಡುವಲ್ಲಿ ಬಹಳಷ್ಟು ಶ್ರಮಿಸಿದ್ದಾರೆ ಎಂದು ಅವರು ಹೇಳಿದರು.

ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಮನೆ ಹಂಚಿಕೆ ಮಾಡುವಲ್ಲಿ ಟಿ.ಜವರೇಗೌಡ ಅವರು ಹೆಚ್ಚಿನ ಶ್ರಮ ವಹಿಸಿದ್ದಾರೆ. ಯಾವುದೇ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಶೇ 90 ಪರಿಹಾರ ಕಂಡುಹಿಡಿಯುತ್ತಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಮಾತನಾಡಿದರು. ಐಟಿಡಿಪಿ ಇಲಾಖಾಧಿಕಾರಿ ಶಿವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್ ಮಚ್ಚಾಡೋ, ಜಿ.ಪಂ ಉಪ ಕಾರ್ಯದರ್ಶಿ ಗುಡೂರು ಭೀಮಸೇನ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT