ಚಿಕ್ಕಅಳುವಾರ: ಹಣ್ಣಿನ ಗಿಡನೆಟ್ಟು ಪರಿಸರ ದಿನಾಚರಣೆ

7

ಚಿಕ್ಕಅಳುವಾರ: ಹಣ್ಣಿನ ಗಿಡನೆಟ್ಟು ಪರಿಸರ ದಿನಾಚರಣೆ

Published:
Updated:
ಕುಶಾಲನಗರ ಸಮೀಪದ ಚಿಕ್ಕಅಳುವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಹಣ್ಣಿನ ಗಿಡನೆಟ್ಟು ಪರಿಸರ ದಿನಾಚರಣೆ ಆಚರಿಸಲಾಯಿತು

ಕುಶಾಲನಗರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಚಿಕ್ಕಅಳುವಾರ ಪ್ರಗತಿ ಬಂಧು ಸಹಾಯ ಸಂಘಗಳ ಒಕ್ಕೂಟ ಸಹಯೋಗದೊಂದಿಗೆ ಚಿಕ್ಕಅಳುವಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ನಡೆಯಿತು.

ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳಾದ ನೆಲ್ಲಿ, ಹಲಸು, ನೇರಳೆ ಹಾಗೂ ಸಪೋಟ ಗಿಡಗಳನ್ನು ನೆಡುವ ಮೂಲಕ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಲಾಯಿತು.

ಹೆಬ್ಬಾಲೆ ವಲಯದ ಮೇಲ್ವಿಚಾರಕ ವಿನೋದ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಸಿಗಳ ಪೋಷಣೆ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಪರಿಸರದ ಬಗ್ಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಮುಖ್ಯ ಶಿಕ್ಷಕಿ ಸುರೇಖಾ ಬಾಯಿ ಹಾಗೂ ಶಿಕ್ಷಕರಾದ ಪ್ರಸನ್ನ, ಶಶಿಧರ್, ಪ್ರಶಾಂತ್ ಹಾಗೂ ಸೇವಾ ಪ್ರತಿನಿಧಿಗಳಾದ ಸುಮಲತಾ, ಸಿದ್ಧರಾಜು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !