ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾನವನ ಉಳಿವಿಗೆ ಪರಿಸರ ಅನಿವಾರ್ಯ: ನ್ಯಾಯಾಧೀಶೆ ಎಸ್.ಸುಜಾತ

Published 7 ಜೂನ್ 2024, 4:31 IST
Last Updated 7 ಜೂನ್ 2024, 4:31 IST
ಅಕ್ಷರ ಗಾತ್ರ

ವಿರಾಜಪೇಟೆ: ‘ಪ್ರತಿಯೊಬ್ಬರ ಉಳಿವಿಗೆ ಹಾಗೂ ಮುಂದಿನ ಪೀಳಿಗೆಗೆ ಪರಿಸರ ಅನಿವಾರ್ಯ, ಎಲ್ಲರೂ ಪರಿಸರ ಸಂರಕ್ಷಣೆ ಮಾಡಬೇಕಾಗಿದೆ’ ಎಂದು 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಧೀಶರಾದ ಎಸ್.ಸುಜಾತ ಅಭಿಪ್ರಾಯಪಟ್ಟರು.

ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ನ್ಯಾಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಮಾತನಾಡಿದರು.

‘ಅರಣ್ಯ ಮನುಷ್ಯನಿಗೆ ಬೇಕಾದ ವಸ್ತುಗಳನ್ನು ನೀಡುತ್ತಿದೆ. ಪ್ರಾಣಿ ಪಕ್ಷಿಗಳು ಸೇರಿ ಅನೇಕ ಜೀವರಾಶಿಗಳು ಅರಣ್ಯದಲ್ಲಿ ಜೀವಿಸುವುದರಿಂದ ಪರಿಸರ ರಕ್ಷಣೆ ಮಾಡುವುದು ಬುದ್ದಿವಂತ ಎನಿಸಿಕೊಂಡ ಮಾನವನ ಕರ್ತವ್ಯವಾಗಿದೆ’ ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಚ್.ಜಗನಾಥ್ ಮಾತನಾಡಿ,‘ಜಿಲ್ಲೆಯ ಶೇ48ರಷ್ಟು ಅರಣ್ಯ ಮತ್ತು ಹಸಿರು ಹೊದಿಕೆಯನ್ನು ನಾವು ಉಳಿಸಿಕೊಳ್ಳುವುದರೊಂದಿಗೆ ರಕ್ಷಿಸಬೇಕು. ಅರಣ್ಯವನ್ನು ರಕ್ಷಿಸುವುದರಿಂದ ಕಾಲಕಾಲಕ್ಕೆ ಮಳೆಬೆಳೆ ಸಾಧ್ಯ. ಅರಣ್ಯ ನೀರನ್ನು ಭೂಮಿಯಲ್ಲಿ ಇಂಗಿಸುವುದರಿಂದ ಜಲ ಸಂರಕ್ಷಣೆಗೆ ನೆರವಾಗಲಿದೆ’ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಮಂಜುನಾಥ್, ಪ್ರಧಾನ ಸಿವಿಲ್ ನ್ಯಾಯಾಧೀಶ ಸಂತೋಷ ಕೊಠಾರಿ, ವಕೀಲರ ಸಂಘದ ಕಾರ್ಯದರ್ಶಿ ವಿ.ಜಿ.ರಾಕೇಶ್, ಅರಣ್ಯ ಸಹಾಯಕ ಸಂರಕ್ಷಣಾಧಿಕಾರಿ ನೆಹರು, ವಲಯ ಅರಣ್ಯಾಧಿಕಾರಿ ದೇವಯ್ಯ, ಎ.ಸಿ.ಎಫ್ ಮಹಾಲಕ್ಷ್ಮಿ, ಉಪ ವಲಯಾಧಿಕಾರಿ ಸಚಿನ್ ನಿಂಬಾಳ್ಕರ್, ಅರಣ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT