ಭಾನುವಾರ, ಡಿಸೆಂಬರ್ 15, 2019
23 °C
ಮಡಿಕೇರಿ: ಜಿಲ್ಲಾಧಿಕಾರಿ ಕಚೇರಿ ಎದುರು ಮಹಿಳೆಯರ ಪ್ರತಿಭಟನೆ

‌ಅಗತ್ಯ ವಸ್ತುಗಳ ಬೆಲೆ ಏರಿಕೆ: ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದ್ದರೂ, ಕೇಂದ್ರ ಸರ್ಕಾರವು ಅದರ ನಿಯಂತ್ರಣಕ್ಕೆ ಕ್ರಮ ಕೈಗೊಂಡಿಲ್ಲ ಎಂದು ಆಪಾದಿಸಿ ವುಮೆನ್ ಇಂಡಿಯಾ ಮೂವ್‌ಮೆಂಟ್ ಕೊಡಗು ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಪ್ರಜ್ಞಾಸಿಂಗ್ ದ್ರೇಶದ್ರೋಹಿ ನಿಲುವು ಹಾಗೂ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಘೋಷಣೆ ಕೂಗಲಾಯಿತು.

ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷೆ ನಫೀಸಾ ಅಡ್ಕರ್ ಮಾತನಾಡಿ, ಒಳ್ಳೆಯ ದಿನಗಳು ಬರಲಿವೆ ಎಂದು ನಾವೆಲ್ಲಾ ಭಾವಿಸಿದ್ದೆವು. ಆದರೆ, ಒಳ್ಳೆಯ ದಿನಗಳು ಇನ್ನೂ ಬರಲಿಲ್ಲ. ಜನರಿಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗಲೂ ಇಲ್ಲ. ಈರುಳ್ಳಿ ಸೇರಿದಂತೆ ದಿನಸಿ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಆರ್ಥಿಕ ಪರಿಸ್ಥಿತಿ ತೀರ ಹದಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು ಜನವಿರೋಧಿ ನೀತಿ ಅನುಸರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ತ್ಯಜಿಸಬೇಕು ಎಂದೂ ಅವರು ಆಗ್ರಹಿಸಿದರು.

ದೇಶದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರತವು ಮಹಿಳೆಯರಿಗೆ ಅತ್ಯಂತಅಪಾಯಕಾರಿ ದೇಶವಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ ಎಂದು ನಫೀಸಾ ನೋವು ತೋಡಿಕೊಂಡರು.

ಪ್ರಜ್ಞಾಸಿಂಗ್ ಠಾಕೋರ್ ಸಂಸತ್ ಪ್ರವೇಶಿಸಿರುವುದು ದೇಶದ ದುರಂತ. ನಾಥೂರಾಮ್ ಗೋಡ್ಸೆಯನ್ನು ಹೊಗಳಿರುವ ದೇಶದ್ರೋಹದ ಆರೋಪ ಹೊತ್ತಿರುವ ಪ್ರಜ್ಞಾ ಸಿಂಗ್ ಹೇಳಿಕೆ ಅವರ ಫ್ಯಾಸಿಸ್ಟ್ ಮನಸ್ಥಿತಿ ತೋರಿಸುತ್ತದೆ ಎಂದು ಆಪಾದಿಸಿದರು.

ಪ್ರತಿಭಟನೆ ನೇತೃತ್ವವನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಫೀಸಾ ಅಕ್ಬರ್, ಸದಸ್ಯರಾದ ತನುಜಾ, ಜಜಾ ಬ್ಯಾಡಗೊಟ್ಟ, ನಸೀಂ, ರೆಹಾನಾ, ಹಸೀನಾ, ಜಾಕಿಯಾ, ತಾಹೀರಾ ವಹಿಸಿದ್ದರು.

ಪ್ರತಿಕ್ರಿಯಿಸಿ (+)