ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಡಗಿನಲ್ಲಿ ಮಳೆ ನಿಂತರೂ ನಿಲ್ಲದ ಕುಸಿತದ ಭೀತಿ

Published 11 ಜುಲೈ 2024, 6:46 IST
Last Updated 11 ಜುಲೈ 2024, 6:46 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ನಿಯಂತ್ರಕ್ಕೆ ಬಂದಿದೆ. ಆದರೆ, ವಿರಾಜಪೇಟೆ ಭಾಗದಲ್ಲಿ ಬುಧವಾರ ಮಳೆ ಬಿರುಸಿನಿಂದ ಸುರಿದಿರುವುದರಿಂದ ಈ ಭಾಗದಲ್ಲಿ ರಸ್ತೆ ಕುಸಿತದ ಭೀತಿ ಎದುರಾಗಿದೆ.

ವಿರಾಜಪೇಟೆ– ಕರಡ ಜಿಲ್ಲಾ ಮುಖ್ಯ ರಸ್ತೆಯ ತೆರಮೆಮೊಟ್ಟೆಯ ಬಳಿ ರಸ್ತೆಯ ಒಂದು ಬದಿ ಕುಸಿಯುವ ಹಂತದಲ್ಲಿದೆ. ಹೀಗಾಗಿ, ಜಿಲ್ಲಾಡಳಿತ ಇಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಿ, ಸಂಚಾರಕ್ಕೆ ಬದಲಿ ಮಾರ್ಗವನ್ನು ಸೂಚಿಸಿದೆ.

ಮಡಿಕೇರಿಯಲ್ಲಿ ತುಂತುರು ಮಳೆಯಷ್ಟೇ ಆಗಿದ್ದು, ಸಂಜೆ ಬಿಸಿಲಿನ ವಾತಾವರಣ ಕಂಡು ಬಂತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT