ಕಾಫಿ ಬೆಳೆಯನ್ನು ಮತ್ತಷ್ಟು ಔನತ್ಯಕ್ಕೆ ಕೊಂಡೊಯ್ಯಬೇಕು; ಡಾ.ಮಂತರ್‌ಗೌಡ
ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯನ್ನು ಮತ್ತಷ್ಟು ಔನತ್ಯಕ್ಕೆ ಕೊಂಡೊಯ್ಯಬೇಕು. ಹಾಗಾಗಿಯೇ ಕಾಫಿ ದಸರೆಯನ್ನು ಆಯೋಜಿಸಲಾಗಿದೆ ಎಂದು ಶಾಸಕ ಡಾ.ಮಂತರ್‌ಗೌಡ ತಿಳಿಸಿದರು. ಕಾಫಿ ದಸರಾ ವಿಚಾರ ಸಂಕಿರಣದಲ್ಲಿ ವಿವಿಧ ತಜ್ಞರು ವಿಜ್ಞಾನಿಗಳು ಕೃಷಿಕರು ಪಾಲ್ಗೊಂಡು ಕಾಫಿ ಉತ್ತೇಜನ ಸಂಬಂಧಿಸಿದಂತೆ ಹಲವು ಅಭಿಪ್ರಾಯ ಸಲಹೆ ಮಾರ್ಗದರ್ಶನ ನೀಡಿದ್ದಾರೆ. ತಜ್ಞರ ಅಭಿಪ್ರಾಯವನ್ನು ಕ್ರೊಢೀಕರಿಸಿ ಕಾಫಿ ಬೆಳೆಯಲ್ಲಿ ಮತ್ತಷ್ಟು ಉತ್ತಮ ಇಳುವರಿ ಪಡೆಯಲು ಶ್ರಮಿಸಬೇಕಿದೆ ಎಂದರು.