ಕುಶಾಲನಗರ: ಮೈಸೂರು ಸುತ್ತೂರು ಮಠದಲ್ಲಿ ಜ.26ರಿಂದ ಫೆ.1ರ ವರೆಗೆ ಹಮ್ಮಿಕೊಂಡಿರುವ ಸುತ್ತೂರು ಜಾತ್ರೋತ್ಸವದ ಪ್ರಚಾರ ರಥಕ್ಕೆ ಪಟ್ಟಣದಲ್ಲಿ ಶನಿವಾರ ಸ್ವಾಗತ ಕೋರಲಾಯಿತು.

ಶಾಸಕ ಡಾ.ಮಂತರಗೌಡ ಅವರು ರಥದಲ್ಲಿನ ಶಿವರಾತ್ರೀಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸುತ್ತೂರು ಸಂಸ್ಥಾನದ ಕೊಡುಗೆ ಅಪಾರ. ಕೃಷಿಮೇಳ, ಸಾಂಸ್ಕೃತಿಕ ವೈವಿಧ್ಯಗಳು ಹಾಗೂ ಗ್ರಾಮೀಣ ಕ್ರೀಡೆಗಳನ್ನು ಪೋಷಿಸುತ್ತಾ ಬಂದಿರುವ ಸುತ್ತೂರು ಜಾತ್ರೆಗೆ ಕೊಡಗು ಜಿಲ್ಲೆಯಿಂದ ಹೆಚ್ಚಿನ ಭಕ್ತರು ಆಗಮಿಸಬೇಕು ಎಂದು ಸಲಹೆ ನೀಡಿದರು.

ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು, ಸದಸ್ಯರಾದ ಡಿ.ಕೆ.ತಿಮ್ಮಪ್ಪ, ವಿವೇಕಾನಂದ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ, ಗಣಪತಿ ದೇವಾಲಯ ಸಮಿತಿ ಅಧ್ಯಕ್ಷ ಎಂ.ಕೆ.ದಿನೇಶ್, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವಿ.ಪಿ.ಶಶಿಧರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಕುಮಾರ್, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಎಚ್.ವಿ.ಶಿವಪ್ಪ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಅಕ್ಕನ ಬಳಗದ ಅಧ್ಯಕ್ಷೆ ಕಮಲಾ ಉದಯಕುಮಾರ್, ಬಸವೇಶ್ವರ ಸಹಕಾರ ಸಂಘದ ಅಧ್ಯಕ್ಷ ಸಾಂಬಶಿವಯ್ಯ, ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಂದೀಶ್, ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಗೋವಿಂದಪ್ಪ, ಕೂಡಿಗೆಯ ಟಿ.ಪಿ.ಹಮೀದ್, ಉದ್ಯಮಿ ಎಚ್.ಟಿ.ರವಿ, ಕದಳಿ ವೇದಿಕೆ ಪದಾಧಿಕಾರಿಗಳಾದ ಲೇಖನಾ, ವೇದಾವತಿ, ಮನು ಜಗದೀಶ್, ಸವಿತಾ ಭರತ್, ಸುತ್ತೂರು ರಥ ಯಾತ್ರೆ ಸಮಿತಿ ಸಂಚಾಲಕ ಪಂಚಾಕ್ಷರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.