ಸೋಮವಾರ, ಆಗಸ್ಟ್ 2, 2021
25 °C

ಭಾರಿ ಮಳೆ: ಮನೆಯ ಮೇಲೆ ಬಿದ್ದ ಮರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿದ್ದಾಪುರ: ಭಾರಿ ಮಳೆಗೆ ಬೃಹತ್ ಮರವೊಂದು ಮನೆಯ ಮೇಲೆ ಬಿದ್ದಿದೆ.

ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ಕಾಲೇಜು ಆವರಣದಲ್ಲಿದ್ದ ಬೃಹತ್‌ಗಾತ್ರದ ಮರವು  ಮಾದಪ್ಪ ಅವರ ಮನೆಯ ಮೇಲೆ ಬಿದ್ದಿದೆ. ಪರಿಣಾಮ ಮನೆಗೆ  ಹಾನಿಯಾಗಿದೆ. ಕಾಲೇಜಿನ ತಡೆಗೋಡೆ ಕೂಡ ಕುಸಿದಿದೆ.

ಮರವನ್ನು ಕಡಿಯುವಂತೆ  ಈ ಹಿಂದೆಯೇ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರೂ ಅವರು ನಿರ್ಲಕ್ಷ್ಯ ವಹಿಸಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸ್ಥಳಕ್ಕೆ ಗ್ರಾಮಲೆಕ್ಕಿಗ ಸಂತೋಷ್ ಹಾಗೂ ಪಿಡಿಒ ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.