ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ | ಜಿಲ್ಲಾಸ್ಪತ್ರೆಯ ನೂತನ ಕಟ್ಟಡದಲ್ಲಿ ಹೆಣ್ಣು ಮಗು ಜನನ

Published 27 ಡಿಸೆಂಬರ್ 2023, 16:55 IST
Last Updated 27 ಡಿಸೆಂಬರ್ 2023, 16:55 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸೇರಿದ ಇಲ್ಲಿನ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದ ನೂತನ ಕಟ್ಟಡದಲ್ಲಿ ಬುಧವಾರ ಹೆಣ್ಣು ಮಗುವೊಂದು ಜನಿಸಿದೆ. ಇದರಿಂದ ಆಸ್ಪತ್ರೆಯ ಸಿಬ್ಬಂದಿ ಹರ್ಷಗೊಂಡಿದ್ದಾರೆ.

ಸುಬ್ಬುಲಕ್ಷ್ಮಿ ಎಂಬುವವರು ಹೆರಿಗೆಗಾಗಿ ಹೊಸ ಕಟ್ಟಡದಲ್ಲಿ ದಾಖಲಾದ ಮೊದಲ ಮಹಿಳೆ ಎನಿಸಿದರು. ಇವರಿಗೆ ಸಹಜ ಹೆರಿಗೆಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸುವುದಕ್ಕೆ ಸಿದ್ಧತೆಗಳು ನಡೆದಿವೆ. ಒಂದೆರಡು ದಿನಗಳಲ್ಲಿ ಸಿದ್ಧತಾ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT