ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾವೆಲ್ಲರೂ ಭಾರತೀಯರಾಗಿ ಬದುಕೋಣ: ಕೆ.ಸಿ.ಕಾರ್ಯಪ್ಪ

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 121ನೇ ಜನ್ಮ ದಿನಾಚರಣೆ
Last Updated 28 ಜನವರಿ 2020, 13:41 IST
ಅಕ್ಷರ ಗಾತ್ರ

ಮಡಿಕೇರಿ: ‘ಜಾತಿ, ಧರ್ಮ, ಪಂಗಡಗಳಿಗಿಂತ ನಾವೆಲ್ಲರೂ ಭಾರತೀಯರಾಗಿ ಬದುಕಬೇಕು’ ಎಂದು ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಂಗಳವಾರ ನಡೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 121ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ‘ನನ್ನ ಶಾಲಾ ದಿನಗಳಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಭಾಷಣಗಳನ್ನು ಹಲವು ಬಾರಿ ಕೇಳಿದ್ದೇನೆ. ಅವರು ಎಂದಿಗೂ ದೇಶವೇ ಮೊದಲು ಎಂಬ ಭಾವನೆಯನ್ನು ಉಳ್ಳವರಾಗಿದ್ದರು. ವ್ಯಕ್ತಿಗೆ ಕರ್ತವ್ಯ ಪ್ರಜ್ಞೆ, ಸಮಯ ಪ್ರಜ್ಞೆ, ಶಿಸ್ತು ಮತ್ತು ಪ್ರಾಮಾಣಿಕತೆ ಇರಬೇಕು. ಕಾರ್ಯಪ್ಪ ಅವರು ದೇಶಪ್ರೇಮ ಮತ್ತು ದೇಶಭಕ್ತಿಗೆ ಹೆಸರಾದವರು’ ಎಂದರು.

ಶಿಸ್ತಿನ ಸಿಪಾಯಿ ಆಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಆದರ್ಶ ಗುಣಗಳುನ್ನು ತಿಳಿದುಕೊಳ್ಳಬೇಕು. ಜೊತೆಗೆ ಅವರ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಕೊಡಗು ಜಿಲ್ಲೆ ಪ್ರವಾಸಿ ತಾಣ ಮತ್ತು ನೈಸರ್ಗಿಕ ಸಂಪತ್ತಿನಿಂದ ಮಾತ್ರವಲ್ಲದೇ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿನಿಂದ ಮತ್ತು ಅವರ ದೇಶ ಸೇವೆಯಿಂದ ಮತ್ತಷ್ಟು ಖ್ಯಾತಿ ಗಳಿಸಿದೆ ಎಂದರು.

ಹಲವು ಗಣ್ಯರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಮಾಜಿ ಸಚಿವ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಜಿ.ಪಂ ಸಿಇಒ ಕೆ.ಲಕ್ಷ್ಮಿಪ್ರಿಯಾ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷ, ನಿವೃತ್ತ ಕರ್ನಲ್ ಕೆ.ಸಿ.ಸುಬ್ಬಯ್ಯ, ಸಂಚಾಲಕ ಬಿ.ಎ.ನಂಜಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಅಧ್ಯಕ್ಷೆ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಹಾಜರಿದ್ದರು.

ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಭಾರತೀಯ ವಿದ್ಯಾಭವನದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT