ಮಡಿಕೇರಿ: ‘ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಸಮಯಪ್ರಜ್ಞೆ, ಶಿಸ್ತಿಗೆ ಹೆಸರುವಾಸಿಯಾಗಿದ್ದರು. ಅವರಂತೆ ಏರ್ ಮಾರ್ಷಲ್(ನಿವೃತ್ತ) ಕಾರ್ಯಪ್ಪ ಅವರು ಕೂಡ ಭಾರತೀಯ ಸೇನೆಗೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆ. ಇಂತಹ ಧೀಮಂತ ನಾಯಕರು ಹುಟ್ಟಿದ ನಾಡಲ್ಲಿ ಹುಟ್ಟಿರುವ ನಾವು ಭಾಗ್ಯವಂತರು’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯು ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ಇಲ್ಲಿನ ಕೊಡಗು ವಿದ್ಯಾಲಯ ಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮದಿನಾಚರಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್, ಎನ್ಸಿಸಿ, ಎನ್ಎಸ್ಎಸ್ಗಳಿಗೆ ಸೇರಿ ಶಿಸ್ತಿನ ಸಿಪಾಯಿಗಳಾಗಬೇಕು ಎಂದು ಕರೆ ನೀಡಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಭಾರತೀಯ ಸೇನೆಯಲ್ಲಿನ ಮಹತ್ವದ ಕಾರ್ಯಗಳು ಇಡೀ ವಿಶ್ವಕ್ಕೆ ಮಾದರಿ ಎಂದು ಹೇಳಿದ ಅವರು, ‘ದೇಶದ ಪ್ರಥಮ ಮಹಾ ದಂಡನಾಯಕರಾಗಿ ಭಾರತೀಯ ಸೇನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರ ಸಾಧನೆಯನ್ನು ಸ್ಮರಿಸಬೇಕು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಕೊಡಗಿನ ಕಣ್ಮಣಿಗಳು ಎಂದು ಹೇಳಿದರು.

ವಿದ್ಯಾರ್ಥಿಗಳು ರಸ್ತೆ ನಿಯಮಗಳನ್ನು ಪರಿಪಾಲನೆ ಮಾಡಬೇಕು. ದುಶ್ಚಟಗಳಿಗೆ ದಾಸರಾಗಬಾರದು. ಭವ್ಯ ಭಾರತದ ಪ್ರಜೆಗಳಾಗಿ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬೇಕು. ಆ ಮೂಲಕ ಈ ನಾಡಿಗೆ ದೇಶಕ್ಕೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು ಎಂದು ಹೇಳಿದರು.

ಗೈಡ್ಸ್ ಜಿಲ್ಲಾ ತರಬೇತಿ ಆಯುಕ್ತರಾದ ಮೈಥಿಲಿ ರಾವ್ ಮಾತನಾಡಿ, ದೇಶಕ್ಕೆ ತನ್ನದೇ ಆದ ಕೊಡುಗೆ ನೀಡಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮದಿನವನ್ನು ಎಲ್ಲರೂ ಸಂಭ್ರಮಿಸಬೇಕು ಎಂದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಜಿಲ್ಲೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದೀಗ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭ ದೇಶ ಭಕ್ತಿ ಗೀತೆಯನ್ನು ಅವರು ಹಾಡಿದರು.

ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರಾ, ಆಡಳಿತಾಧಿಕಾರಿ ಪಿ.ರವಿ, ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಎನ್.ಯು.ನೀಲಮ್ಮ, ಅರುಣ್ ಕುಮಾರ್, ಕಾರ್ಯದರ್ಶಿಗಳಾದ ಸುಚಿತಾ ಕಾವೇರಪ್ಪ, ಎಂ.ಟಿ.ಸೂರಜ್ ಕುಮಾರ್, ಪದಾಧಿಕಾರಿಗಳಾದ ಗುಲ್ಶನ್, ಕೆ.ಮಮತಾ, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್ ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆ, ರಸ್ತೆ ಸುರಕ್ಷತೆ ಕುರಿತು ಪ್ರಸ್ತುತಪಡಿಸಿದ ನೃತ್ಯ ಗಮನ ಸೆಳೆಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನ್ಮದಿನಾಚರಣೆ ಹಾಗೂ ರಸ್ತೆ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗೆ ನಡೆಸಲಾದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನೂ ವಿತರಿಸಲಾಯಿತು.

‘ನಡೆಯುವಾಗಲೂ ನಿಯಮ ಪಾಲಿಸಿ’

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಮಾತನಾಡಿ ‘ವಾಹನದಲ್ಲಿ ಚಾಲನೆ ಮಾಡುವಾಗ ಮಾತ್ರವಲ್ಲದೆ ನಡೆಯುವಾಗಲೂ ನಿಯಮವನ್ನು ಪಾಲನೆ ಮಾಡಬೇಕು’ ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಸ್ಕೌಟ್ಸ್-ಗೈಡ್ಸ್ ಎನ್ಸಿಸಿ ಕ್ರೀಡೆ ಸೇರಿದಂತೆ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು. ಪುಸ್ತಕ ಸಾಮಾಜಿಕ ಜಾಲತಾಣವನ್ನು ಸದುಪಯೋಗಪಡಿಸಿಕೊಂಡು ಅದರಲ್ಲಿನ ಮಾಹಿತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಾಗೂ ಇತರರಿಗೂ ಮಾಹಿತಿ ನೀಡಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.