ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಶಾಲನಗರ: ವಿದ್ಯುತ್ ತಂತಿ ತುಂಡಾಗಿ ಕುರುಚಲು ಕಾಡಿಗೆ ಬೆಂಕಿ

Published 2 ಮಾರ್ಚ್ 2024, 14:37 IST
Last Updated 2 ಮಾರ್ಚ್ 2024, 14:37 IST
ಅಕ್ಷರ ಗಾತ್ರ

ಕುಶಾಲನಗರ: ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾದು ಹೋಗಿರುವ ಹೈಟೆನ್ಷನ್ ವಿದ್ಯುತ್ ಮಾರ್ಗದಲ್ಲಿನ ತಂತಿ ತುಂಡಾಗಿ ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ಬಾಳುಗೋಡು ಗ್ರಾಮದಲ್ಲಿ ಶನಿವಾರ ನಡೆದಿದೆ.

ಮೈಸೂರಿನಿಂದ ಕುಶಾಲನಗರ ಮಾರ್ಗವಾಗಿ ಮಡಿಕೇರಿಗೆ ಹಾದು ಹೋಗಿರುವ 11ಕೆ.ವಿ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿದೆ. ಇದರಿಂದ ಹೆದ್ದಾರಿ ಬದಿ ಗದ್ದೆ, ಕುರುಚಲು ಕಾಡಿಗೆ ಬೆಂಕಿ ಹೊತ್ತಿಕೊಂಡಿದೆ. ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯ ಮಾವಾಜಿ ರಕ್ಷಿತ್ ಸಮಯ ಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿದೆ.

ತಕ್ಷಣ ಕುಶಾಲನಗರ ಸೆಸ್ಕ್‌ಗೆ ರಕ್ಷತ್ ವಿಷಯ ತಿಳಿಸಿದ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜು ಅನ್ನು ಸ್ಥಗಿತಗೊಳಿಸಲಾಯಿತು. ಬಾಳುಗೋಡು ಜಮೀನಿನಲ್ಲಿ ಹತ್ತಿದ ಬೆಂಕಿ ಪಕ್ಕದ ಅರಣ್ಯಕ್ಕೂ ವ್ಯಾಪಿಸುವ ಸಾಧ್ಯತೆ ತಪ್ಪಿತು. ಈ ಬಗ್ಗೆ ಮೈಸೂರು ಅರಣ್ಯ ಇಲಾಖೆಗೂ ಮಾಹಿತಿ ತಿಳಿಸಿದರು.

ಗ್ರಾಮಸ್ಥರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡು ಹೆಚ್ಚಿನ ಅನಾಹುತ ತಪ್ಪಿಸಿದರು.ಸ್ಥಳಕ್ಕೆ ಕುಶಾಲನಗರ ಚೆಸ್ಕಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್ ಮತ್ತು ಸಹಾಯಕ ಎಂಜಿನಿಯರ್ ವಿನೋದ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT