ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು ವಿ.ವಿಯಿಂದ ಪದವಿ ಫಲಿತಾಂಶ ಪ್ರಕಟ

Published 6 ಮಾರ್ಚ್ 2024, 8:42 IST
Last Updated 6 ಮಾರ್ಚ್ 2024, 8:42 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ವಿಶ್ವವಿದ್ಯಾಲಯವು ರಾಜ್ಯದಲ್ಲೇ ಮೊದಲಿಗೆ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದ ವಿ.ವಿ ಎಂಬ ಶ್ರೇಯಕ್ಕೆ ಪಾತ್ರವಾಗಿದೆ ಎಂದು ಕೊಡಗು ವಿ.ವಿ ಕುಲಪತಿ ಕುಲಪತಿ ಪ್ರೊ.ಅಶೋಕ ಎಸ್. ಆಲೂರ ತಿಳಿಸಿದ್ದಾರೆ.

ಕೊಡಗು ವಿ.ವಿ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿ.ಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪದವಿಗಳ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಲಾಗಿದೆ. ಎರಡನೇ ಹಂತದಲ್ಲಿ ಬಿ.ಎ ಪದವಿಯ ಫಲಿತಾಂಶವನ್ನು ಸಹ ಅತೀ ಶೀಘ್ರವೇ ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

‘ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನವಿದ್ದು ಅದರಂತೆಯೇ ಕೊಡಗು ವಿಶ್ವವಿದ್ಯಾಲಯವು ಪರೀಕ್ಷೆಗಳು ನಡೆದ ಕೇವಲ ಒಂದು ದಿನದೊಳಗೆ ಮೊದಲ ಹಂತದ ಫಲಿತಾಂಶವನ್ನು ಪ್ರಕಟಿಸುವಲ್ಲಿ ಸಫಲವಾಗಿದೆ’ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ.ಸೀನಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT