ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಮೊದಲ ಮಳೆಯ ಸಿಂಚನ: ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ

Last Updated 18 ಮಾರ್ಚ್ 2022, 11:12 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗಿನ ವಿವಿಧೆಡೆ ಶುಕ್ರವಾರ ವರ್ಷದ ಮೊದಲ ಮಳೆ ಸುರಿಯಿತು. ಬಿಸಿಲಿನ ಧಗೆಯಿಂದ ತತ್ತರಿಸಿದ್ದ ಜನರಿಗೆ ವರುಣ ತಂ‍ಪೆರೆಯಿತು.

ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆಯು ನಾಪೋಕ್ಲು, ತಣ್ಣಿಮಾನಿ, ಸುಂಟಿಕೊಪ್ಪ, ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಸ್ವಲ್ಪ ಸಮಯ ಜೋರಾಗಿ ಸುರಿಯಿತು. ಗುಡುಗು, ಸಿಡಿಲಿನ ಆರ್ಭಟವೂ ಇತ್ತು. ಮಡಿಕೇರಿ, ತಾಳತ್ತಮನೆ, ಮಾದಾಪುರ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಿದೆ.

ಕಾಫಿ ಹೂವು ಮಾಡಲು ಬೆಳೆಗಾರರು ಮಳೆಯ ನಿರೀಕ್ಷೆಯಲ್ಲಿದ್ದರು. ಜಿಲ್ಲೆಯ ಕೆಲವು ಭಾಗದಲ್ಲಿ ಸುರಿದಿರುವ ಮಳೆಯು ಬೆಳೆಗಾರರ ಮೊಗದಲ್ಲಿ ನಗು ಮೂಡಿಸಿದೆ. ಮಾರ್ಚ್‌ನಲ್ಲಿ ಸುರಿಯುವ ಮಳೆಗೆ ‘ಹೂವಿನ ಮಳೆ’ ಎಂದೇ ಕಾಫಿ ಬೆಳೆಗಾರರು ಕರೆಯುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT