ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ತೋಟಗಾರಿಕೆ ಇಲಾಖೆಯ ಆಶ್ರಯದಲ್ಲಿ ಫೆ.7ರಿಂದ 10ರ ತನಕ ನಗರದ ರಾಜಾಸೀಟ್ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.

7ರಂದು ಸಂಜೆ 4 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜಮ್ಮ, ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್ ಪಾಲ್ಗೊಳ್ಳಲಿದ್ದಾರೆ.

10ರಂದು ಸಂಜೆ 4ಕ್ಕೆ ಫಲಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭ ನಡೆಯಲಿದೆ. ಶಾಸಕರಾದ ಅಪ್ಪಚ್ಚುರಂಜನ್, ಜಿ.ಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ.ಬೋಪಣ್ಣ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎನ್.ಟಿ.ಕಿರಣ್ ಕಾರ್ಯಪ್ಪ, ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಾಚೇಟ್ಟಿರ ಚೋಟು ಕಾವೇರಪ್ಪ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಬಿ.ಎಸ್‌ಲೋಕೇಶ್ ಸಾಗರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ.ಪಾರ್ವತಿ ಅಪ್ಪಯ್ಯ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿನಾರಾಯಣ ಕಜೆಗದ್ದೆ, ಮಾಜಿ ಸಚಿವ ಎಂ.ಸಿ.ನಾಣಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿ.ಪಂ ಸಿಇಒ ಕೆ.ಲಕ್ಷ್ಮಿಪ್ರಿಯ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೆ.ಎಸ್.ಚಂದ್ರಶೇಖರ್ ಇತರರು ಪಾಲ್ಗೊಳ್ಳಲಿದ್ದಾರೆ.

7, 8 ಹಾಗೂ 9ರಂದು ಸಂಜೆ 5.30ರಿಂದ ರಾಜಾಸೀಟ್ ಉದ್ಯಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಭಾಗಿತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಪಿಟೋನಿಯಾ ಆಸ್ಟರ್, ಸೇವಂತಿಗೆ, ಮೇರಿಗೋಲ್ಡ್, ಸಾಲ್ವಿಯಾ, ಪಿಂಕ್ಸ್, ವಾಟರ್‌ಲಿಲ್ಲಿ, ಫೆಸಿಲಿಯಾ, ಡೇಲಿಯಾ, ಬಿಗೋನಿಯಾ ಸೇರಿದಂತೆ ಹಲವು ತಳಿಯ ಪುಷ್ಪಗಳು ರಾಜಾಸೀಟ್‌ಗೆ ಬಂದಿವೆ. ಉದ್ಘಾಟನೆಗೂ ಮೊದಲೇ ರಾಜಾಸೀಟ್‌ಗೆ ಪುಷ್ಪ ಕಳೆ ತುಂಬಿವೆ. ಬರೀ ಪುಷ್ಪರಾಶಿಯ ಸೊಬಗು ಮಾತ್ರವಲ್ಲ. ಮಕ್ಕಳ ಮನಸ್ಸು ಗೆಲ್ಲಲು ಬಣ್ಣ ಬಣ್ಣದ ಹೂವಿನಿಂದ ಅಲಂಕೃತವಾಗುವ ವಿವಿಧ ಪ್ರಾಣಿ ಪಕ್ಷಿಗಳ ಕಲಾಕೃತಿಗಳು ಕೂಡ ಫಲಪುಷ್ಪ ಪ್ರದರ್ಶನದಲ್ಲಿ ಗಮನ ಸೆಳೆಯಲಿದೆ. ತರಕಾರಿ ಕೆತ್ತನೆಗಳೂ ಮನಸೂರೆಗೊಳ್ಳಲಿವೆ.

ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಿದೆ. ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಬರಬೇಕು ಅಥವಾ ಶಾಲಾ-ಕಾಲೇಜಿನ ಪ್ರಾಂಶುಪಾಲರಿಂದ ಪತ್ರ ತರಬೇಕು. ಉಳಿದಂತೆ ಪ್ರವಾಸಿಗರಿಗೆ ₹10 ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.