7

20ರಿಂದ ಮೂರ್ನಾಡು ಮೈದಾನದಲ್ಲಿ ಫುಟ್‌ಬಾಲ್‌ ಟೂರ್ನಿ

Published:
Updated:

ಮಡಿಕೇರಿ: ಜಿಲ್ಲಾ ಮುಸ್ಲಿಂ ಸ್ಪೋರ್ಟ್‌ ಅಸೋಸಿಯೇಷನ್ ಹಾಗೂ ಕೊಂಡಂಗೇರಿ ಯೂತ್ ಕ್ಲಬ್‌ ವತಿಯಿಂದ ಜುಲೈ 20ರಿಂದ 22ರವರೆಗೆ ಮೂರ್ನಾಡು ವಿದ್ಯಾಸಂಸ್ಥೆಯ ಮೈದಾನದಲ್ಲಿ ಮುಸ್ಲಿಂ ಕಪ್ ‘ಸೂಪರ್ 7– ಫುಟ್‌ಬಾಲ್‌ ಟೂರ್ನಿ ಆಯೋಜಿಸಲಾಗಿದೆ ಎಂದು ಕ್ರೀಡಾಕೂಟದ ಸ್ಥಾಪಕ ಅಧ್ಯಕ್ಷ ಆಸೀಫ್ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಫುಟ್‌ಬಾಲ್‌ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಪ್ರಥಮಬಾರಿಗೆ ಈ ಟೂರ್ನಿ ಹಮ್ಮಿಕೊಳ್ಳಲಾಗಿದೆ. ಈಗಾಗಲೇ 60ಕ್ಕೂ ಹೆಚ್ಚಿನ ತಂಡಗಳು ನೋಂದಣಿ ಮಾಡಿಕೊಂಡಿದ್ದು, 80ಕ್ಕೂ ಅಧಿಕ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಜುಲೈ 12 ತಂಡಗಳ ಹೆಸರು ನೋಂದಣಿಗೆ ಕೊನೆಯ ದಿನವಾಗಿದೆ. ಪ್ರಥಮ, ದ್ವಿತೀಯ, ತೃತೀಯ ಹಾಗೂ ನಾಲ್ಕನೇ ಬಹುಮಾನ ಪಡೆದ ತಂಡಗಳಿಗೆ ಟ್ರೋಫಿ ಹಾಗೂ ನಗದು ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊಬೈಲ್‌: 94838 14129, ತಯ್ಯುಬ್: 95357 82783 ಸಂಪರ್ಕಿಸಬಹುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮುಸ್ಲಿಂ ಸ್ಪೋರ್ಟ್‌ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಕೆ.ಎ.ಅಬ್ದುಲ್ ರಶೀದ್, ಅಸ್ಕರ್, ರಫೀಕ್, ಸಲೀಂ ಉಪಸ್ಥಿತರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !