ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಶಾಲನಗರ ಪುರಸಭೆಗೆ ಹೊಸದಾಗಿ ಚುನಾವಣೆ ನಡೆಸಲು ಒತ್ತಾಯ

Published 23 ಆಗಸ್ಟ್ 2024, 7:07 IST
Last Updated 23 ಆಗಸ್ಟ್ 2024, 7:07 IST
ಅಕ್ಷರ ಗಾತ್ರ

ಕುಶಾಲನಗರ: ಇಲ್ಲಿನ ಪುರಸಭೆಗೆ ಹೊಸದಾಗಿ ಚುನಾವಣೆ ನಡೆಸಬೇಕು ಎಂದು ಮುಳ್ಳುಸೋಗೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ.ಎಸ್.ಶಿವಾನಂದ ಒತ್ತಾಯಿಸಿದರ.

ಕುಶಾಲನಗರ ಪಟ್ಟಣ ಪಂಚಾಯತಿಗೆ ಮುಳ್ಳುಸೋಗೆ ಗ್ರಾಮ ಪಂಚಾಯತಿ ವ್ಯಾಪ್ತಿಯನ್ನು ಸೇರ್ಪಡೆ ಮಾಡಿ ಪುರಸಭೆಯಾಗಿ ಮೇಲ್ದರ್ಜೆಗೇರಿಸಿ ವರ್ಷಗಳೆ ಕಳೆದಿವೆ. ಆದರೂ, ವಾರ್ಡ್ ಪುನರ್ ವಿಂಗಡನೆ ಮಾಡದೆ ಪುರಸಭೆಗೆ ಚುನಾವಣೆ ನಡೆಸದೆ ಹಿಂದಿನ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆಸುತ್ತಿರುವ ಕ್ರಮ ಸರಿಯಲ್ಲ ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪುರಸಭೆಯಾಗಿ ಮೇಲ್ದರ್ಜೆಗೇರಿಸಬೇಕು ಎಂಬ ಉದ್ದೇಶದಿಂದ ಮುಳ್ಳುಸೋಗೆ ಗ್ರಾಮ ಪಂಚಾಯತಿಯ ಒಟ್ಟು 23 ಸದಸ್ಯರು ಒಮ್ಮತದಿಂದ ತಮ್ಮ ಸದಸ್ಯತ್ವವನ್ನು ತ್ಯಾಗ ಮಾಡಿ ಒಪ್ಪಿಗೆ ಸೂಚಿಸಿದ್ದೆವು. ಆದರೆ, ಈಗ ಪಟ್ಟಣ ಪಂಚಾಯತಿಗೆ 2ನೇ ಹಂತದ ಚುನಾವಣೆ ನಡೆಸಲು ಮುಂದಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪಟ್ಟಣ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯದಂತೆ ಕಾನೂನು ಮೊರೆ ಹೋಗಿ ಹೈಕೋರ್ಟ್ ನಿಂದ ತಡೆಯಾಜ್ಞೆ ತರಲಾಗಿದೆ ಎಂದರು.

ಮುಳ್ಳುಸೋಗೆ ಗ್ರಾಮ ಅಭಿವೃದ್ಧಿಯಿಂದ ವಂಚಿತವಾಗಿದೆ. ರಾಷ್ಟ್ರಪ್ರಶಸ್ತಿ ಪಡೆದ ‌ಮುಳ್ಳುಸೋಗೆ ಪಂಚಾಯತಿ ರದ್ದುಗೊಂಡಿದೆ. ಚುನಾಯಿತ 23 ಸದಸ್ಯರ ಬೀದಿಪಾಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಳ್ಳುಸೋಗೆ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಎಂ.ಎಸ್.ರಾಜೇಶ್ ಮಾತನಾಡಿ, ಕುಶಾಲನಗರ ಪುರಸಭೆಯಾಗಿ ಮೇಲ್ದರ್ಜೆಗೇರಿದ್ದರೂ ಕೂಡ ರಾಜಕೀಯ ದುರುದ್ದೇಶದಿಂದ ಪಟ್ಟಣ ಪಂಚಾಯತಿಗೆ ಚುನಾವಣೆ ಮುಂದಾಗಿರುವುದು ಸರಿಯಲ್ಲ ಎಂದರು.

ಮುಳ್ಳುಸೋಗೆ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಸಿ.ಎಂ.ಆಶೀಫ್ ಮಾತನಾಡಿ, ಮುಳ್ಳುಸೋಗೆ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯತಿಯಾಗಿ‌ ಮೇಲ್ದರ್ಜೆಗೇರಿಸಲಿ. ಇಲ್ಲವಾದಲ್ಲಿ ಹೊಸದಾಗಿ ಪುರಸಭೆಗೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮುಳ್ಳುಸೋಗೆ ಗ್ರಾಮಸ್ಥರು ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಮುಖಂಡರಾದ ಎಂ.ಎಸ್.ಕುಮಾರ್, ಪ್ರದೀಪ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT