ಮಡಿಕೇರಿ: ಯಾವುದೇ ಉದ್ದೇಶಕ್ಕಾದರು ಸರಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಅನುಮತಿ ಕಡ್ಡಾಯವಾಗಿದೆ. ಕಾನೂನಾತ್ಮಕವಾಗಿ ಅನುಮತಿ ಪಡೆಯದೆ ಮರಗಳನ್ನು ತೆರವುಗೊಳಿಸಿದ್ದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ಶುಂಠಿ ಬೆಳೆಗಾಗಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಮರಗಳನ್ನು ಹನನ ಮಾಡಲಾಗುತ್ತಿದೆ. ಈ ಕೃತ್ಯ ಎಸಗುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ.

ಜಾಗದ ಮಾಲೀಕರು, ಜಾಗವನ್ನು ಗುತ್ತಿಗೆ ಪಡೆದವರು ಹಾಗೂ ಕೃತ್ಯವನ್ನು ಎಸಗಿದವರ ಮೇಲೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ.

ಕೃತ್ಯಕ್ಕೆ ಬಳಸಿದ ವಾಹನ ಮತ್ತು ಯಂತ್ರೋಪಕರಣಗಳನ್ನೂ ವಶಪಡಿಸಿಕೊಳ್ಳಲಾಗುತ್ತದೆ ಮತ್ತು ಆರೋಪಿತರು ಮರಗಳ ಮೌಲ್ಯ ಹಾಗೂ ಪರಿಸರ ನಾಶ ಮಾಡಿದ್ದಕ್ಕೆ ದಂಡ ತೆರಬೇಕಾಗಿದೆ. ತಪ್ಪಿದ್ದಲ್ಲಿ ಆರೋಪಿತರ ಮೇಲೆ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ, ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ಉದ್ದೇಶಕ್ಕೆ ಮರ ತೆರವುಗೊಳಿಸಲು ಅರಣ್ಯ ಇಲಾಖೆಯ ಪೂರ್ವಾನುಮತಿ ಪಡೆಯಬೇಕು ಎಂದು ಅರಣ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.