ಮಡಿಕೇರಿ: ‘ಯಾರಿಗೂ ಸಹ ತೊಂದರೆಯಾಗದಂತೆ ಕಾಳಜಿ ವಹಿಸಿ’ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಂಪಾಜೆ, ಚೆಂಬು, ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅರಣ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಚೆಂಬು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಸರ್ಕಾರ ಶಕ್ತಿ, ಗೃಹಜ್ಯೋತಿ, ಗೃಹಭಾಗ್ಯ, ಯುವನಿಧಿ, ಅನ್ನಭಾಗ್ಯ ಹೀಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಬಡವರು ಸಹ ಉತ್ತಮ ಬದುಕು ನಡೆಸುವಂತಾಗಲು ಹಲವು ಸಮಾಜಪರ ಕಾರ್ಯಕ್ರಮಗಳನ್ನು ನೀಡಿದೆ. ಅವುಗಳನ್ನು ಸ್ಮರಿಸಬೇಕು ಎಂದರು.

ಕಾಡಾನೆ ಮತ್ತು ಮಾನವ ಸಂಘರ್ಷ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ದಬ್ಬಡ್ಕದಲ್ಲಿ ಕೆಲವು ಕುಟುಂಬಗಳು ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸದೆ ಇರುವ ಕುರಿತು ಗಮನಹರಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲು, ಕುಂದುಕೊರತೆ ಆಲಿಸಿದರು.

ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರಾದ ಸಂಕೇತ್ ಪೂವಯ್ಯ, ಉಪ ಅರಣ್ಯ ಸಂರಕ್ಷಾಣಧಿಕಾರಿ ಅಭಿಷೇಕ್ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರೆ ಎಷ್ಟೋ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಬಹುದು
–ಎ.ಎಸ್.ಪೊನ್ನಣ್ಣ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.