ಮಡಿಕೇರಿ: ಇಲ್ಲಿನ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ (ಐಟಿಡಿಪಿ) ಕಚೇರಿಯಲ್ಲಿ ಅರಣ್ಯ ಹಕ್ಕು ಕೋಶ ಆರಂಭಗೊಂಡಿತು.

ಈ ವೇಳೆ ಮಾತನಾಡಿದ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ‘ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ (ಐಟಿಡಿಪಿ) ಕಚೇರಿಯಲ್ಲಿ ನೂತನವಾಗಿ ಅರಣ್ಯ ಹಕ್ಕು ಕೋಶ ಆರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅರಣ್ಯ ಹಕ್ಕು ಕೋಶವನ್ನು ಉದ್ಘಾಟಿಸಿದ್ದಾರೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮಾರ್ಗದರ್ಶನದಲ್ಲಿ ನಗರದ ಜಿಲ್ಲಾ ಪಂಚಾಯಿತಿಯ ಐಟಿಡಿಪಿ ಕಚೇರಿಯಲ್ಲಿ ಅರಣ್ಯಹಕ್ಕು ಕೋಶ ತೆರೆಯಲಾಗಿದೆ’ ಎಂದು ಹೇಳಿದರು.

ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಈ ಕೋಶ ಕಾರ್ಯನಿರ್ವಹಿಸಲಿದ್ದು, ಈಗಾಗಲೇ ಅರಣ್ಯ ಹಕ್ಕುಪತ್ರವನ್ನು ಪಡೆದಿರುವ ಕುಟುಂಬಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವುದು ಮತ್ತು ಸಂಗ್ರಹವಾಗಿರುವ ದತ್ತಾಂಶಗಳನ್ನು ಡಿಜಿಟಲೀಕರಣಗೊಳಿಸುವುದು ಅರಣ್ಯ ಹಕ್ಕು ಕೋಶದ ಪ್ರಮುಖ ಕಾರ್ಯವಾಗಿದೆ ಎಂದು ಮಾಹಿತಿ ನೀಡಿದರು.

ಅರಣ್ಯ ಹಕ್ಕು ಪತ್ರ ಹೊಂದಿಲ್ಲದವರ ಮತ್ತು ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡಿರುವ ಕುಟುಂಬಗಳ ಕುರಿತು ಪುನರ್ ಪರಿಶೀಲನೆ ನಡೆಸಿ ಅರ್ಹ ಅರಣ್ಯವಾಸಿಗಳಿಗೆ ಅಗತ್ಯ ಸೌಕರ್ಯ ಒದಗಿಸಲು ಅರಣ್ಯ ಹಕ್ಕು ಕೋಶ ಪೂರಕವಾಗಿದೆ ಎಂದು ತಿಳಿಸಿದರು.

ಈ ಕುರಿತಂತೆ ಯಾವುದೇ ದೂರು, ಸಲಹೆ ಮತ್ತು ಮಾಹಿತಿಗಳು ಬೇಕಿದ್ದಲ್ಲಿ ನೋಡಲ್ ಅಧಿಕಾರಿ ದೇವರಾಜ್ ಮೊ: 9108813845, ಸಹಾಯಕ ನೋಡಲ್ ಅಧಿಕಾರಿ ಆಶಿಕ್ ಮೊ: 8861957577, ತಾಂತ್ರಿಕ ಸಂಯೋಜಕರಾದ ಮಾದಯ್ಯ ಮೊ: 9845771807, ತಾಂತ್ರಿಕ ಸಹಾಯಕ ಸಂಯೋಜಕರಾದ ಸಂಜಯ್ ಮೊ:7348841734 ಅವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.

4277 ಅರ್ಜಿ ಸ್ವೀಕೃತ 2430 ಅರ್ಜಿ ಅನುಮೋದನೆ

‘ಅರಣ್ಯಹಕ್ಕು ಕಾಯ್ದೆಯಡಿ ಜಿಲ್ಲೆಯಲ್ಲಿ 4277 ಅರ್ಜಿಗಳು ಸ್ವೀಕೃತವಾಗಿದ್ದು 2430 ಅರ್ಜಿಗಳನ್ನು ಅನುಮೋದಿಸಲಾಗಿದೆ. ಈ ಮೂಲಕ ವೈಯಕ್ತಿಕ ಹಾಗೂ ಕಿರು ಅರಣ್ಯ ಸಂಗ್ರಹಣೆಗಾಗಿ 31967.82 ಎಕರೆ ಮಂಜೂರು ಮಾಡಲಾಗಿದೆ. 1847 ಅರ್ಜಿಗಳು ತಿರಸ್ಕೃತಗೊಂಡಿದ್ದು ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆಗೆ ಅರಣ್ಯ ಹಕ್ಕು ನಿಯಮದ ಬಗ್ಗೆ ಸಲಹೆ ನೀಡಲು ಕೋಶದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.