ಸೋಮವಾರಪೇಟೆ: ಯಡವನಾಡು ಮೀಸಲು ಅರಣ್ಯದೊಳಗೆ ಮರಗಳ್ಳತನ ನಿರಂತರವಾಗಿ ನಡೆಯುತ್ತಿದ್ದು, ಕೂಡಲೆ ಅರಣ್ಯ ಇಲಾಖೆ ಸ್ಥಳೀಯ ಗ್ರಾಮಸ್ಥರ ಸಮ್ಮುಖದಲ್ಲಿ ಕೂಂಬಿಂಗ್(ಶೋಧನಾ ಕಾರ್ಯಚರಣೆ) ಅರಣ್ಯದಲ್ಲಿ ನಡೆಸಬೇಕೆಂದು ಗ್ರಾಮ ಅರಣ್ಯ ಸಂರಕ್ಷಣಾ ಸಮಿತಿ ಅಧ್ಯಕ್ಷ ಮಚ್ಚಂಡ ಅಶೋಕ್ ಆಗ್ರಹಿಸಿದರು.

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆಯ ಕೆಲ ಸಿಬ್ಬಂದಿಗಳ ಸಹಕಾರದಿಂದ ಮರಗಳ ಹನನ ನಡೆಯುತ್ತಿದೆ. ಮರಗಳ್ಳರ ತಂಡ ಮೀಸಲು ಅರಣ್ಯದೊಳಗೆ ಪ್ರವೇಶ ಮಾಡಿ ತೇಗ ಸೇರಿದಂತೆ ಬೆಲೆಬಾಳುವ ಮರಗಳನ್ನು ಕಡಿದು, ವಾಹನಗಳಲ್ಲಿ ಸಾಗಿಸುತ್ತಿದ್ದಾರೆ. ಅರಣ್ಯ ಇಲಾಖೆಯ ಬಹುತೇಕ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಅರೋಪಿಸಿದರು.

ಡಿ.13ರಂದು ಯಡವನಾಡು ಮೀಸಲು ಅರಣ್ಯದ ಕಾಜೂರು ಅರಣ್ಯದಲ್ಲಿ ತೇಗದ ಮರಗಳನ್ನು ಕಡಿದು ಸಾಗಿಸಲಾಗಿದೆ. ಮೀಸಲು ಅರಣ್ಯದೊಳಗೆ ತೇಗ ಕಡಿದು ವಾಹನಕ್ಕೆ ತುಂಬಿಸುತ್ತಿದ್ದ ಸಂದರ್ಭ ಸಿಕ್ಕಿಬಿದ್ದ ಅರೋಪಿಯೊಬ್ಬ ಒಂದೆ ದಿನದಲ್ಲಿ ಜಾಮೀನು ಪಡೆದುಕೊಂಡಿದ್ದಾನೆ. ಉಳಿದ ಅರೋಪಿಗಳನ್ನು ಇದುವರಗೆ ಬಂಧಿಸಿಲ್ಲ ಎಂದು ದೂರಿದರು.

ಪ್ರಕರಣ ನಡೆದು 7 ದಿನಗಳ ನಂತರ ಸ್ಥಳಕ್ಕೆ ಸಿಸಿಎಫ್, ಡಿಸಿಎಫ್, ಎಸಿಎಫ್ ಅವರುಗಳು ಸ್ಥಳಪರಿಶೀಲನೆ ಮಾಡಿದ್ದಾರೆ. ಪರಿಶೀಲನೆ ಸಂದರ್ಭ ಅರಣ್ಯ ಇಲಾಖೆಯ ವಸತಿ ಗೃಹದ ಪಕ್ಕದಲ್ಲೇ 20ಕ್ಕೂ ಹೆಚ್ಚು ತೇಗದ ಮರಗಳನ್ನು ಕಡಿದಿರುವುದು ಮೇಲಾಧಿಕಾರಿಗಳ ಗಮನಕ್ಕೆ ಬಂದಿದೆ. ಮರಗಳ್ಳತನದಲ್ಲಿ ಕೆಲ ಸಿಬ್ಬಂದಿಗಳ ಕೈವಾಡವಿರುವ ಬಗ್ಗೆ ತನಿಖೆ ನಡೆಯುತ್ತಿದ್ದು, ಕೂಡಲೆ ಅರಣ್ಯ ಸಿಬ್ಬಂದಿಗಳನ್ನು ವಜಾ ಮಾಡಬೇಕು. ಕೂಂಬಿಂಗ್ ನಡೆಸಿ ಮರಹನನದ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಬೇಕು. ತಪ್ಪಿದಲ್ಲಿ ಸೋಮವಾರಪೇಟೆ ಅರಣ್ಯ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮೀಸಲು ಅರಣ್ಯದಲ್ಲಿ ನಿರಂತರ ಮರಗಳ್ಳತನವಾಗುತ್ತಿರುವ ಬಗ್ಗೆ ಶಾಸಕರಾದ ಡಾ.ಮಂತರ್ ಗೌಡ ಅವರು, ಅಕ್ರಮದ ಬಗ್ಗೆ ಅರಣ್ಯ ಸಚಿವರ ಗಮನಕ್ಕೆ ತರಬೇಕು. ಉನ್ನತಮಟ್ಟದ ತನಿಖೆ ನಡೆಸಿ ಮರಗಳ್ಳರೊಂದಿಗೆ ಶಾಮೀಲಾಗಿರುವ ಅರಣ್ಯ ಇಲಾಖೆಯ ನೌಕರರ ವಿರುದ್ಧ ಕ್ರಮ ಜರುಗಿಸಬೇಕು. ಈ ಬಿಟ್ಟರೆ ಮೀಸಲು ಅರಣ್ಯದಲ್ಲಿ ಬೆಲೆ ಬಾಳುವ ಮರಗಳು ಕಾಣೆಯಾಗಲಿವೆ ಎಂದು ಹೇಳಿದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಂ.ದಿನೇಶ್ ಮಾತನಾಡಿ, ಮೀಸಲು ಅರಣ್ಯದೊಳಗೆ ಕೊಟ್ಯಾಂತರ ರೂ.ಗಳ ಮರಗಳ್ಳತನವಾಗಿರುವ ಬಗ್ಗೆ ಬಲವಾದ ಸಂಶಯ ಮೂಡಿದೆ. ಮರಗಳ್ಳರಿಗೆ ಕಠಿಣ ಶಿಕ್ಷೆಯಾಗುವ ಸೆಕ್ಷನ್ ಗಳನ್ನು ಹಾಕಬೇಕು. ಬೇಲಿಯೇ ಎದ್ದು ಹೊಲ ಮೇಯ್ದರೆ ಅರಣ್ಯವನ್ನು ರಕ್ಷಿಸಲು ಸಾಧ್ಯವಿಲ್ಲ. ರೈತರು ಸ್ವಂತ ಜಾಗದಲ್ಲಿ ಮನೆ ನಿರ್ಮಿಸಿಕೊಳ್ಳಲು ಒಂದು ಮರ ಕಡಿದರೆ, ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಮಾನಸಿಕ ಹಿಂಸೆಯೊಂದಿಗೆ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಆದರೆ, ಮೀಸಲು ಅರಣ್ಯದಲ್ಲಿ ಮರಗಳ್ಳರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುತ್ತಿಲ್ಲ. ಮೀಸಲು ಅರಣ್ಯದೊಳಗೆ ಮರಗಳ್ಳತನದಲ್ಲಿ ಭಾಗಿಯಾಗಿರುವ ಅರೋಪಿತ ಅರಣ್ಯ ಇಲಾಖೆಯ ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ತಪ್ಪಿದಲ್ಲಿ ಅರಣ್ಯ ಇಲಾಖೆಯ ಮುಂದೆ ಧರಣಿ ನಡೆಸಲಾಗುವುದು ಎಂದು ಹೇಳಿದರು.
ಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಜಿ.ಎಂ.ಹೂವಯ್ಯ, ಪದಾಧಿಕಾರಿಗಳಾರ ಕುಶಾಲಪ್ಪ, ರಮೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.