ಮಂಗಳವಾರ, ನವೆಂಬರ್ 19, 2019
23 °C

ಕಿರು ಸೇತುವೆ ಕಾಮಗಾರಿಗೆ ಭೂಮಿಪೂಜೆ

Published:
Updated:
Prajavani

ವಿರಾಜಪೇಟೆ: ಪಟ್ಟಣದ ಗೋಣಿಕೊಪ್ಪಲು ರಸ್ತೆಯ ಮಾಂಸ ಮಾರುಕಟ್ಟೆ ಬಳಿಯಲ್ಲಿ ನೂತನ ಕಿರು ಸೇತುವೆ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಗುರುವಾರ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಪ್ರತಿ ವರ್ಷದ ಮಳೆಗಾಲದಲ್ಲಿ ಪ್ರಸ್ತುತ ಇರುವ ಕಿರುಸೇತುವೆಯ ಮೇಲ್ಭಾಗದಲ್ಲಿ ನೀರು ಹರಿದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿತ್ತು. ಇದಕ್ಕಾಗಿ  ₹32 ಲಕ್ಷದ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು ತಕ್ಷಣದಿಂದ ಕಾಮಗಾರಿ ಆರಂಭವಾಗಲಿದೆ ಎಂದರು.
ಈ ಸಂದರ್ಭ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಎಂ.ಸುರೇಶ್, ಯತೀಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್, ಪಟ್ರಪಂಡ ರಘು ನಾಣಯ್ಯ, ಪಟ್ಟಣ ಪಂಚಾಯಿತಿ ಸದಸ್ಯರು ಇದ್ದರು.

ಪ್ರತಿಕ್ರಿಯಿಸಿ (+)