ಗೋಣಿಕೊಪ್ಪಲು: ಬಾಳೆಲೆಯಲ್ಲಿ ₹27.23 ಕೋಟಿ ವೆಚ್ಚದಲ್ಲಿ 66/11 ಕೆವಿ ಸಾಮರ್ಥ್ಯದ ನೂತನ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ‘ಬಾಳೆಲೆ ವ್ಯಾಪ್ತಿಯಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವ ಮಹತ್ವಕಾಕ್ಷೆಯಿಂದ 66/11 ಕೆವಿ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಲಾಗುವುದು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಾದ್ಯಂತ ಗುಣಮಟ್ಟದ ವಿದ್ಯುತ್ ಪೂರೈಕೆ ಕೈಗೊಳ್ಳಲು ಸುಮಾರು ₹200 ಕೋಟಿಗೂ ಅಧಿಕ ಅನುದಾನವನ್ನು ರಾಜ್ಯ ಸರ್ಕಾರ ನೀಡಿದೆ’ ಎಂದು ಹೇಳಿದರು.

‘ಹಂತ ಹಂತವಾಗಿ ಕ್ಷೇತ್ರದಾದ್ಯಂತ ಈ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಬಾಳೆಲೆಯಲ್ಲಿ ಸ್ಥಾಪನೆಗೊಳ್ಳಲಿರುವ ವಿದ್ಯುತ್ ವಿಚಾರಣಾ ಕೇಂದ್ರದಿಂದ ಈ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಕೆ ಆಗಲು ಸಹಕಾರಿಯಾಗಲಿದೆ’ ಎಂದು ವಿವರಿಸಿದರು.

ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಚೀಫ್ ಎಲಿಟ್ರಿಕಲ್ ಆಫೀಸರ್ ತೀತಿರ ರೋಷನ್ ಅಪ್ಪಚ್ಚು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ತಾಲ್ಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ತಾಲ್ಲೂಕು ಪ್ರಚಾರ ಸಮಿತಿ ಅಧ್ಯಕ್ಷ ಆಪಟ್ಟಿರ ಟಾಟು ಮೊಣ್ಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪೃಥ್ಯು, ವಲಯ ಅಧ್ಯಕ್ಷ ಕೋದಂಡ ಸೋಮಣ್ಣ, ಪಂಚಾಯಿತಿ ಸದಸ್ಯ ವಿನು ಉತ್ತಪ್ಪ, ನಿಟ್ಟೂರು ವಲಯ ಅಧ್ಯಕ್ಷ ಪವನ್, ರಂಜಿ, ಅಚ್ಚುತ್, ಅಜ್ಜಿಕುಟ್ಟಿರ ಗಿರೀಶ್, ಹರೀಶ್ ಪೂವಯ್ಯ, ಸಿದ್ದು ನಾಚಪ್ಪ, ಮನು, ಇಲಾಖೆಯ ಅಧಿಕಾರಿ ಚೋಂದಮ್ಮ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.