ನಾಪೋಕ್ಲು: ಇಲ್ಲಿಗೆ ಸಮೀಪದ ಅವಂದೂರು ಗ್ರಾಮದ ಗೋಪಾಲಕೃಷ್ಣ ದೇವಸ್ಥಾನದ ಗರ್ಭಗುಡಿ ಮತ್ತು ತೀರ್ಥ ಮಂಟಪದ ಶಿಲಾನ್ಯಾಸ ಕಾರ್ಯಕ್ರಮ ಈಚೆಗೆ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು.

700 ವರ್ಷ ಪುರಾತನ ಇತಿಹಾಸವಿರುವ ಗ್ರಾಮದ ಧಾರ್ಮಿಕ ಸಾನ್ನಿಧ್ಯ ಗೋಪಾಲಕೃಷ್ಣ ದೇವಸ್ಥಾನ. ಶ್ರೀಕೃಷ್ಣ ಪರಮಾತ್ಮ ಅವಂದೂರು ಗ್ರಾಮದ ಗ್ರಾಮ ದೇವರು. ಪ್ರಸ್ತುತ ಶ್ರೀ ದೇವರ ಸನ್ನಿಧಿಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪೂರ್ವಭಾವಿ ಕೆಲಸ ಕಾರ್ಯಗಳು ಧಾರ್ಮಿಕ ವಿಧಿ ವಿಧಾನದಂತೆ ಶ್ರದ್ಧಾ ಭಕ್ತಿಯಿಂದ ನಡೆಯುತ್ತಿವೆ.

ಕಾಸರಗೋಡಿನ ನೀಲೇಶ್ವರ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದೊಂದಿಗೆ ತಂಡದವರಾದ ಮುರಾರಿ ಮತ್ತು ಸ್ಕಂದ ತಂತ್ರಿಗಳು ಗೋಪಾಲಕೃಷ್ಣ ದೇವಸ್ಥಾನದ ಗರ್ಭಗುಡಿ ಮತ್ತು ತೀರ್ಥ ಮಂಟಪದ ಶಿಲಾನ್ಯಾಸ ಕಾರ್ಯಕ್ರಮದ ವಿಶೇಷ ಪೂಜೆ, ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭ ಸಿಂಧೂರ ಕಾರ್ಯಾಚರಣೆಯಲ್ಲಿ ಯಶಸ್ಸು ಗಳಿಸಿದ ಭಾರತೀಯ ಸೇನೆಯನ್ನು ಅಭಿನಂದಿಸಲಾಯಿತು. ನಮ್ಮ ಹೆಮ್ಮೆಯ ಸೈನಿಕರು ಯಾವುದೇ ಹಾನಿಯಿಲ್ಲದೆ ಸುರಕ್ಷಿತವಾಗಿ ದೇಶದ ಗಡಿರಕ್ಷಿಸಲು ಗೋಪಾಲಕೃಷ್ಣ ಸ್ವಾಮಿ ಶಕ್ತಿ ನೀಡಲಿ ಎಂದು ದೇವರಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಲಾಯಿತು.

ಧಾರ್ಮಿಕ ಕಾರ್ಯಕ್ರಮದಲ್ಲಿ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ದಿನೇಶ್ ಭಟ್, ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕಡ್ಯದ ಸೋಮಣ್ಣ, ಉಪಾಧ್ಯಕ್ಷ ಚೊಕ್ಕಾಡಿ ಅಪ್ಪಯ್ಯ, ಕಾರ್ಯದರ್ಶಿ ಪಟ್ಟಡ ಸುಗುಣ ಕುಮಾರ್, ಖಜಾಂಚಿ ಬೆಳ್ಯನ ಚಂದ್ರಪ್ರಕಾಶ್, ಜೀರ್ಣೋದ್ಧಾರ ಸಮಿತಿಯ ಸರ್ವ ಪದಾಧಿಕಾರಿಗಳು, ದೇವಸ್ಥಾನ ಜೀರ್ಣೋದ್ಧಾರದ ಮೂಲ ಸಮಿತಿ, ಗ್ರಾಮದ ತಕ್ಕ ಮುಖ್ಯಸ್ಥರು, ಭಕ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.