ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಯುವಕರ ಭವಿಷ್ಯ ಹಾಳು: ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್

Published 19 ಏಪ್ರಿಲ್ 2024, 14:04 IST
Last Updated 19 ಏಪ್ರಿಲ್ 2024, 14:04 IST
ಅಕ್ಷರ ಗಾತ್ರ

ನಾಪೋಕ್ಲು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಜನರಿಗೆ ಮಂಕು ಬೂದಿ ಎರೆಚುತ್ತಾ ಬಂದಿದೆ .ಹತ್ತು ವರ್ಷಗಳ ಅವಧಿಯಲ್ಲಿ ಯುವಕರ ಭವಿಷ್ಯವನ್ನು ಹಾಳು ಮಾಡಿದೆ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಟೀಕಿಸಿದರು.

ಕಾಂಗ್ರೆಸ್ ಪಕ್ಷದ ವತಿಯಿಂದ ಪಟ್ಟಣದಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ. ಯುವಕರಿಗೆ ಉದ್ಯೋಗ ಪೂರೈಸಿಲ್ಲ. ಮೀಸಲಾತಿಯನ್ನು ಕಿತ್ತು ಹಾಕಿದ್ದಾರೆ. ಸಂವಿಧಾನ ಬದಲಾಯಿಸುವುದೇ ಬಿಜೆಪಿಯ ಮುಖ್ಯ ಕಾರ್ಯಕ್ರಮವಾಗಿದೆ. ಬಿಜೆಪಿ ಸರ್ಕಾರದಲ್ಲಿ ಸರ್ವಾಧಿಕಾರಿ ಆಡಳಿತ ನಡೆಯುತ್ತಿದೆ ಎಂದು ದೂರಿದರು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಜನ ಮಾನಸದಲ್ಲಿ ಉಳಿದಿವೆ. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ನೀಡಿದ್ದ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಅತ್ಯಧಿಕ ಮತಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಸಂಸದ ಪ್ರತಾಪ ಸಿಂಹ ಕಳೆದ ಹತ್ತು ವರ್ಷಗಳಲ್ಲಿ ಕೊಡಗಿಗೆ ಏನನ್ನು ಮಾಡಿಲ್ಲ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ರಾಜ ಮನೆತನದ ಬಿಜೆಪಿ ಅಭ್ಯರ್ಥಿ ಯಧುವೀರ್ ಜನರ ಸಮಸ್ಯೆಗಳಿಗೆ ಸ್ಪಂದಿಸುವರೇ ಎಂದು ಪ್ರಶ್ನಿಸಿದರು. ಮೂಲ ಸೌಲಭ್ಯಗಳನ್ನು ಕಲ್ಪಿಸಲು ಕಾಂಗ್ರೆಸ್ ಪಕ್ಷ ಆದ್ಯತೆ ನೀಡುತ್ತಿದೆ. ಇಂತಹ ಪಕ್ಷದ ಅಭ್ಯರ್ಥಿಯಲ್ಲಿ ಗೆಲ್ಲಿಸಬೇಕು ಎಂದರು.

ಪಕ್ಷದ ರಾಜ್ಯ ವಕ್ತಾರ ಟಿ.ಪಿ.ರಮೇಶ್, ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಮಾಚೆಟ್ಟಿರ ಕುಶು ಕುಶಾಲಪ್ಪ, ಇಸ್ಮಾಯಿಲ್, ನೆರವಂಡ ಉಮೇಶ್, ಅಬ್ದುಲ್ ರೆಹಮಾನ್, ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT