ಶನಿವಾರಸಂತೆ: ಇಲ್ಲಿಗೆ ಸಮೀಪದ ಮುಳ್ಳೂರು ಗ್ರಾಮದ ಗೆಳೆಯರ ಬಳಗದ ವತಿಯಿಂದ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗೌರಿ ಗಣಪತಿ ಮೂರ್ತಿಯನ್ನು ಭಾನುವಾರ ವಿಸರ್ಜನೆ ಮಾಡಲಾಯಿತು.
ಗೌರಿ ಗಣೇಶ ವಿಸರ್ಜನೆ ಪ್ರಯುಕ್ತ ಬೆಳಿಗ್ಗೆ ಗೌರಿ, ಗಣಪತಿ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತಾದಿಗಳಿಗೆ ತೀರ್ಥಪ್ರಸಾದ ವಿನಿಯೋಗದ ನಂತರ ವಾಹನದಲ್ಲಿ ಅಲಂಕರಿಸಿದ ಮಂಟಪದಲ್ಲಿ ಗೌರಿ ಮೂರ್ತಿ ಮತ್ತು 8 ಅಡಿ ಎತ್ತರದ ಗಣಪತಿ ಮೂರ್ತಿಯನ್ನು ಕೂರಿಸಲಾಯಿತು.
ಬಳಿಕ ವಾದ್ಯಗೋಷ್ಠಿಯೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಶೋಭಾಯಾತ್ರೆ ನಡೆಸಲಾಯಿತು.
ಸಂಜೆ ಗ್ರಾಮದ ಗುದ್ದಲಿ ಕೆರೆಯಲ್ಲಿ ಗೌರಿ-ಗಣಪತಿ ಮೂರ್ತಿಯನ್ನು ಶ್ರದ್ದಾಭಕ್ತಿಯಿಂದ ವಿಸರ್ಜನೆ ಮಾಡಲಾಯಿತು. ಗಣೇಶೋತ್ಸವ ಮೆರವಣಿಗೆಯಲ್ಲಿ ನೂರಾರು ಮಂದಿ ಭಾಗಿಯಾದರು.
ಗ್ರಾಮದ ಅರ್ಚಕ ಶರತ್ ಪೂಜಾ ವಿಧಿವಿಧಾನ ನೆರವೇರಿಸಿದರು. ಈ ವೇಳೆ ಗೆಳೆಯರ ಬಳಗದ ಅಧ್ಯಕ್ಷ ಅನಿಲ್, ಕಾರ್ಯದರ್ಶಿ ಸಂತೋಷ್ ಭಾಗವಹಿಸಿದ್ದರು.