ಪ್ರಜಾವಾಣಿ ವಾರ್ತೆ

ಸೋಮವಾರಪೇಟೆ: ಪಟ್ಟಣದಲ್ಲಿ ಸಾರ್ವಜನಿಕರ ಸೇವಾ ಸಮಿತಿ ಪ್ರತಿಷ್ಠಾಪಿಸಿದ್ದ ಶ್ರೀ ಗೌರಿ ಗಣಪತಿಯನ್ನು ಶನಿವಾರ ರಾತ್ರಿ ಆನೆಕೆರೆಯಲ್ಲಿ ವಿಸರ್ಜಿಸಲಾಯಿತು.
ದೇವಾಲಯದಲ್ಲಿ ಬೆಳಿಗ್ಗೆ ಗಣಪತಿ ಹೋಮ ನಡೆಸಿ, ಮದ್ಯಾಹ್ನ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಸಂಜೆ ವಿದ್ಯುತ್ ದೀಪಗಳಿಂದ ಅಲಂಕೃತ ಮಂಟಪದಲ್ಲಿ ಉತ್ಸವ ಮೂರ್ತಿಗಳನ್ನು ಇಟ್ಟು, ವಿವಿಧ ಬ್ಯಾಂಡ್ ಸೆಟ್ನೊಂದಿಗೆ ಮೆರವಣಿಗೆ ನಡೆಸಲಾಯಿತು.
ಇದರೊಂದಿಗೆ ಕಕ್ಕೆ ಹೊಳೆ ಬಳಿಯಲ್ಲಿನ ಗೌರಿ ಗಣೇಶ್ ಉತ್ಸವ ಮೂರ್ತಿಗಳು ಹಾಗೂ ಮಹದೇಶ್ವರ ಬ್ಲಾಕ್ ನಲ್ಲಿ ಪ್ರತಿಷ್ಠಾಪಿಸಿದ ಮೂರ್ತಿಗಳನ್ನು ಆನೆಕೆರೆಯಲ್ಲಿ ವಿಸರ್ಜಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.