ಸೋಮವಾರ, ಏಪ್ರಿಲ್ 12, 2021
29 °C

ಶನಿವಾರಸಂತೆ: ಶ್ರದ್ಧಾಭಕ್ತಿಯ ಗಣೇಶ ಚತುರ್ಥಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶನಿವಾರಸಂತೆ: ಪಟ್ಟಣದ ಜನತೆ ಶನಿವಾರ ಗಣೇಶ ಚತುರ್ಥಿ ಹಬ್ಬವನ್ನು ಸರಳ ಹಾಗೂ ಸಂಪ್ರದಾಯಬದ್ಧವಾಗಿ ಆಚರಿಸಿದರು.

ಗಣಪತಿ- ಚಂದ್ರಮೌಳೇಶ್ವರ- ಪಾರ್ವತಿ ದೇವಾಲಯದ ಅರ್ಚಕ ಮಾಲತೇಶ್ ಭಟ್ ಅವರ ನೇತೃತ್ವದಲ್ಲಿ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತರು ಗಂಗೆಪೂಜೆ ಮಾಡಿದ ನಂತರ ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ತಂದು ದೇವಾಲಯದಲ್ಲಿ ಪ್ರತಿಷ್ಠಾಪಿಸಿದರು. ಮೂರ್ತಿಯನ್ನು ಅಲಂಕರಿಸಿ, ವಿಶೇಷ ಭಕ್ಷ್ಯಗಳ ನೈವೇದ್ಯ ಸಮರ್ಪಿಸಿ, ವಿಧಿವಿಧಾನಗಳೊಂದಿಗೆ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಬೆರಳೆಣಿಕೆಯ ಭಕ್ತರು ‌ಪಾಲ್ಗೊಂಡಿದ್ದರು.

ಕೊರೊನಾ ಸೋಂಕಿನ ಭೀತಿಯಿಂದ ಜನರು ತಮ್ಮ ಮನೆಗಳಲ್ಲೇ ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ, ಕುಟುಂಬ ಸದಸ್ಯರೊಂದಿಗೆ ಸರಳವಾಗಿ ಹಬ್ಬವನ್ನು ಆಚರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು