ಸೋಮವಾರಪೇಟೆ: ಪಟ್ಟಣದಲ್ಲಿ ‘ಸಾರ್ವಜನಿಕರ ಸೇವಾ ಸಮಿತಿ’ಯಿಂದ ಪ್ರತಿಷ್ಠಾಪಿಸಿದ್ದ ಗೌರಿ, ಗಣಪತಿ ಮೂರ್ತಿಯನ್ನು ಶನಿವಾರ ರಾತ್ರಿ ಆನೆಕೆರೆಯಲ್ಲಿ ವಿಸರ್ಜಿಸಲಾಯಿತು.
ದೇವಾಲಯದಲ್ಲಿ ಬೆಳಿಗ್ಗೆ ಗಣಪತಿ ಹೋಮ ನಡೆಸಿ, ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಸಂಜೆ ವಿದ್ಯುತ್ ದೀಪಗಳಿಂದ ಅಲಂಕೃತ ಮಂಟಪದಲ್ಲಿ ಉತ್ಸವ ಮೂರ್ತಿಗಳನ್ನು ಕೂರಿಸಿ ಮೆರವಣಿಗೆ ನಡೆಸಲಾಯಿತು.
ಇದರೊಂದಿಗೆ ಕಕ್ಕೆಹೊಳೆ ಬಳಿಯಲ್ಲಿನ ಗೌರಿ ಗಣೇಶ ಮೂರ್ತಿ ಹಾಗೂ ಮಹದೇಶ್ವರ ಬ್ಲಾಕ್‌ನಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಆನೆಕೆರೆಯಲ್ಲಿ ವಿಸರ್ಜಿಸಲಾಯಿತು.