ಕುಶಾಲನಗರ: ‘ಸಾಕು ಪ್ರಾಣಿಗಳು ಸೇರಿದಂತೆ ಯಾವುದೇ ಪ್ರಾಣಿಗಳು ಕಚ್ಚಿದಾಗ ಕೂಡಲೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸತೀಶ್ ಕುಮಾರ್ ಹೇಳಿದರು.

ಸಮೀಪದ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಸರ್ವೇಕ್ಷಣ ಘಟಕ ಹಾಗೂ ಕುಶಾಲನಗರ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ರೇಬಿಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ರೇಬಿಸ್ಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿದೆ. ರೇಬಿಸ್ ಬಗ್ಗೆ ಆರೋಗ್ಯ ಇಲಾಖೆಯಿಂದ ಹೆಚ್ಚು ಜನಜಾಗೃತಿ ಮಾಡಲಾಗುತ್ತಿದೆ. ಸಾರ್ವಜನಿಕರು ಇದರ ಸೌಲಭ್ಯ ಪಡೆದುಕೊಳ್ಳಬೇಕು’ ಎಂದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ ಮಾತನಾಡಿ, ‘ಹುಚ್ಚು ನಾಯಿ ಕಡಿತದಿಂದ ದೇಶದಲ್ಲಿ ವರ್ಷಕ್ಕೆ 15 ರಿಂದ 20 ಸಾವಿರ ಮಂದಿ ಬಲಿಯಾಗುತ್ತಿದ್ದು, ಈ ಪೈಕಿ ಶೇ40 ರಷ್ಟು 15 ವರ್ಷದ ಒಳಗಿನ ಮಕ್ಕಳೇ ಆಗಿದ್ದಾರೆ. ರೇಬಿಸ್ ವೈರಸ್ನಿಂದ ಹರಡುತ್ತದೆ. ಯಾವುದೇ ಶ್ವಾನ, ಬೆಕ್ಕು, ಹಂದಿ ಅಥವಾ ಮತ್ತಾವುದೇ ಕಾಡು ಪ್ರಾಣಿಗಳು ಕಚ್ಚಿದರೂ ಕೂಡ ತಾತ್ಸಾರ ಮಾಡಬಾರದು. ಕೂಡಲೇ ಕಚ್ಚಿದ ಭಾಗವನ್ನು ಸೋಪಿನಿಂದ ತೊಳೆದು ಆದಷ್ಟು ಬೇಗ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು’ ಎಂದರು.

ಈ ಸಂದರ್ಭ ಸಮುದಾಯ ಔಷಧಿ ವಿಭಾಗದ ಮುಖ್ಯಸ್ಥ ಡಾ.ರಾಮಚಂದ್ರ ಕಾಮತ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಬಿ.ಎಲ್. ಶ್ರೀನಿವಾಸ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಡಾ. ಮಹೇಶ್, ಡಾ. ಕೃತಿಕಾ, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಪಿಕಾ ಮೂರ್ತಿ, ತಾಲ್ಲೂಕು ಆರೋಗ್ಯ ನಿರೀಕ್ಷಕ ವಿಶ್ವಜ್ಞ, ಕೂಡಿಗೆ ಆರೋಗ್ಯ ನಿರೀಕ್ಷಕ ಚಂದ್ರೇಶ್, ಶುಶ್ರೂಷಕಿ ಸಕೀನಾ, ಆಶಾ ಕಾರ್ಯಕರ್ತೆಯರ ಮೇಲ್ವಿಚಾರಕಿ ಗೀತಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.