ಮಡಿಕೇರಿ: ತಾಲ್ಲೂಕಿನ ಮದೆನಾಡು ಗ್ರಾಮದ ಬಿಜಿಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಮಂಗಳವಾರ ಶಾಲೆಯ ಸಭಾಂಗಣದಲ್ಲಿ ಪ್ರದರ್ಶಿಸಿದ 3 ಯೋಗ ಪ್ರದರ್ಶನಗಳು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನ ಪುಟ ಸೇರಿದವು.

ಡಿಂಬಾಸನ ಭಂಗಿಯಲ್ಲಿ 1 ನಿಮಿಷಕ್ಕೆ 10 ಸುತ್ತು ಬರುವ ಗುರಿ ನಿಗದಿ ಮಾಡಲಾಗಿತ್ತು. ಆದರೆ, ಸಿಂಚನಾ ನಿಮಿಷಕ್ಕೆ 15 ಸುತ್ತು ಬರುವ ಮೂಲಕ ಅಚ್ಚರಿ ಮೂಡಿಸಿದಳು. ಖಂಡಪೀಡಾಸನ ಭಂಗಿಯಲ್ಲಿ 1 ನಿಮಿಷ ಇರುವ ಗುರಿ ಇತ್ತು. ಆದರೆ, 1.44 ನಿಮಿಷ ಇರುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರಳಾದಳು. ಧನುರಾಸನ ಭಂಗಿಯಲ್ಲಿ ಒಂದು ನಿಮಿಷಕ್ಕೆ 18 ಬಾರಿ ಸುತ್ತುವ ಮೂಲಕ ಅಂತರರಾಷ್ಟ್ರೀಯ ದಾಖಲೆ ನಿರ್ಮಿಸಿದಳು.

ಈ ಮೂರು ದಾಖಲೆಗಳನ್ನು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನ ಏಷ್ಯಾ ವಿಭಾಗದ ಮುಖ್ಯಸ್ಥ ಮನಿಷ್ ವೈಶ್ನೋಯಿ ದೃಢಪಡಿಸಿದರು. ಆದಿಚುಂಚಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಪ್ರಮಾಣಪತ್ರ ವಿತರಿಸಿದರು.

ಇಲ್ಲಿಯವರೆಗೆ ಸಿಂಚನಾ ಅಂತರರಾಷ್ಟ್ರೀಯ ಮಟ್ಟದ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ನಲ್ಲಿ 2 , ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ 8, ರಾಷ್ಟ್ರಮಟ್ಟದ ಇಂಡಿಯ ಬುಕ್ ಆಫ್ ರೆಕಾರ್ಡ್ನಲ್ಲಿ 1 ಹಾಗೂ ರಾಜ್ಯಮಟ್ಟದ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ನಲ್ಲಿ 1 ದಾಖಲೆಯನ್ನು ನಿರ್ಮಿಸಿದ್ದಾಳೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.