ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೋಣಿಕೊಪ್ಪಲು ಹಳೆಯ ಕಟ್ಟಡ ಸುರಕ್ಷತೆ ಪರಿಶೀಲನೆ

Published 24 ಜೂನ್ 2024, 16:07 IST
Last Updated 24 ಜೂನ್ 2024, 16:07 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಪಟ್ಟಣದಲ್ಲಿ 40 ವರ್ಷಕ್ಕೂ ಮೇಲ್ಪಟ್ಟ ಕಟ್ಟಡಗಳಿದ್ದರೆ ಅವುಗಳನ್ನು ಮಾಲಿಕರೇ ದುರಸ್ತಿ ಪಡಿಸಿಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಹೇಳಿದರು.

ಹಳೆಯ ಕಟ್ಟಡಗಳಲ್ಲಿ ಹೋಟೆಲ್ ಹಾಗೂ ಅಂಗಡಿ ಮಳಿಗೆಗಳಿಗೆ ಪರವಾನಗಿ ನವೀಕರಿಸುವಾಗ ಕಟ್ಟಡ ಸುರಕ್ಷತೆ ಬಗ್ಗೆ ಗಮನಹರಿಸಲಾಗುವುದು. ಹಳೆಯ ಕಟ್ಟಡಗಳನ್ನು ದುರಸ್ತಿ ಪಡಿಸಿಕೊಳ್ಳದಿದ್ದರೆ ಅಂಥವುಗಳ ವ್ಯಾಪಾರ ವಹಿವಾಟು ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.

ಹಳೆಯ ಕಟ್ಟಡಗಳ ಸುರಕ್ಷತೆ ಬಗ್ಗೆ ಎಂಜಿನಿಯರ್ ಮೂಲಕ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಪಟ್ಟಣದಲ್ಲಿ ಕಳೆದ ವಾರ ನಡೆದ ಕಟ್ಟಡ ಕುಸಿತ ಎಚ್ಚರಿಕೆಯ ಗಂಟೆಯಾಗಿದೆ. ಈ ಕಾರಣದಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ 30ಕ್ಕೂ ಹೆಚ್ಚು ಹಳೆಯ ಕಟ್ಟಡಗಳ ಸುರಕ್ಷತೆ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಪಂಚಾಯಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT