ಗೋಣಿಕೊಪ್ಪಲು: ವಿದಾರ್ಥಿಗಳಲ್ಲಿ ಸರಳತೆ,ಶಿಸ್ತು ಹಾಗೂ ನಾಯಕತ್ವದ ಗುಣ ಬೆಳೆಸುವಲ್ಲಿ ಎನ್ಎಸ್ಎಸ್ ಸಹಕಾರಿಯಾಗಲಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಎನ್ ಎಸ್ ಎಸ್ ನೋಡಲ್ ಅಧಿಕಾರಿ ಪ್ರೊ. ದಯಾನಂದ ಹೇಳಿದರು.

ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎನ್ ಎಸ್ ಎಸ್ ವಿಶೇಷ ವಾರ್ಷಿಕ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ತರಗತಿ ಹೊರಗಿನ ಪಾಠ ಮತ್ತು ಅರಿವು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಇಂತಹ ಶಿಕ್ಷಣ ಎನ್ ಎಸ್ ಎಸ್ ನಲ್ಲಿ ಸಿಗಲಿದೆ ಎಂದು ಹೇಳಿದರು.

ಕಾವೇರಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ಬಿ.ಕಾವೇರಿಯಪ್ಪ ಧ್ವಜಾರೋಹಣ ನೆರವೇರಿಸಿ ಮಾತನಾಡಿ ವಿದ್ಯಾರ್ಥಿಗಳು ಶಿಬಿರದಲ್ಲಿ ಕಲಿತ ಉತ್ತಮ ಗುಣಗಳನ್ನು ಬದುಕಿನಲ್ಲಿ ಅಳವಡಿಸಿಕೊಂಳ್ಳಬೇಕು ಎಂದರು. ಪ್ರತಿಜ್ಞಾವಿಧಿ ಬೋಧಿಸಿದರು.

ಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಪ್ಪಣಮಾಡ ಕೆ.ಕಾವೇರಮ್ಮ ಮಾತನಾಡಿದರು. ಕಾವೇರಿ ಎಜುಕೇಶನ್ ಸೊಸೈಟಿ ನಿರ್ದೇಶಕ ಕೊಂಗಂಡ ಪಿ.ಅಚ್ಚಯ್ಯ ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದ ಜೊತೆಗೆ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಬೇಕು. ರಸ್ತೆ ಬದಿ ಬಿದ್ದಿರುವ ಕಸಗಳನ್ನು ತೆಗೆಯುವುದರ ಜತೆಗೆ ಸಾರ್ವಜನಿಕರಲ್ಲಿ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಬೇಕು ಎಂದು ನುಡಿದರು.

ಹುದಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಎಚ್., ಎಂ.ಜಯಮ್ಮ, ವಿಎಸ್ಎಸ್ಎನ್ ಬ್ಯಾಂಕ್ ಅಧ್ಯಕ್ಷ ಅಜ್ಜಿಕುಟ್ಟೀರ ಪ್ರವೀಣ, ಎನ್ಎಸ್ಎಸ್ ಅಧಿಕಾರಿಗಳಾದ ಮಂಡಂಗಡ ಎ.ಕುಶಾಲಪ್ಪ, ಪುತ್ತಾಮನೆ ಪೂಜಾ ಶರಣು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.