ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈಫಲ್ ಶೂಟಿಂಗ್ ಸ್ಪರ್ಧೆ: ಲಿಕಿತ್ ಗೆ ಕಂಚಿನ ಪದಕ

Published 9 ಜುಲೈ 2024, 16:12 IST
Last Updated 9 ಜುಲೈ 2024, 16:12 IST
ಅಕ್ಷರ ಗಾತ್ರ

ಗೋಣಿಕೊಪ್ಪಲು : ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಷನ್ ಆಯೋಜಿಸಿದ್ದ ಬೆಂಗಳೂರಿನ ಸಾಯಿ ಶೂಟಿಂಗ್  ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಸ್ಥಳೀಯ ಕಾಲ್ಸ್ ಶಾಲೆಯ ವಿದ್ಯಾರ್ಥಿ ವಿವಿಕ್ತ ಲಿಕಿತ್ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಸಬ್ ಜೂನಿಯರ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರಿದ ಲಿಕಿತ್ ಎರಡು ಕಂಚಿನ ಪದಕ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ಕಾಲ್ಸ್ ಶಾಲೆಯ 28 ಸ್ಪರ್ಧಿಗಳು ಪಾಲ್ಗೊಂಡಿದ್ದರು. ವಿಜೇತ ವಿದ್ಯಾರ್ಥಿಗೆ ಶಾಲೆಯ ವ್ಯವಸ್ಥಾಪಕ ನಿರ್ದೇಶಕಿ ಅಶ್ವಿನಿ ನಾಚಪ್ಪ, ನಿರ್ದೇಶಕ ದತ್ತ ಕರುಂಬಯ್ಯ, ಪ್ರಾಂಶುಪಾಲರು ಹಾಗೂ ಅಧ್ಯಾಪಕರು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT