ಗೋಣಿಕೊಪ್ಪಲು: ನಿಗದಿತ ಸಮಯಕ್ಕೆ ಆಹಾರ ಸೇವನೆ ಹಾಗೂ ನಿಯಮಿತ ವ್ಯಾಯಾಮದ ಮೂಲಕ ಮಧುಮೇಹವನ್ನು ನಿಯಂತ್ರಣಕ್ಕೆ ತರಬಹುದು ಎಂದು ಸರ್ಕಾರಿ ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ. ಆರ್.ಎಚ್.ಅಮೂಲ್ಯ ಹೇಳಿದರು.

ಇಲ್ಲಿನ ಕಾವೇರಿ ಕಾಲೇಜಿನ ಎನ್ ಎಸ್ ಎಸ್ ಘಟಕ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಮಧುಮೇಹ ರೋಗದ ಲಕ್ಷಣಗಳು ಹಾಗೂ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮನಸ್ಸಿಗೆ ಒತ್ತಡವಾಗದಂತೆ ಎಚ್ಚರಿಕೆ ವಹಿಸಬೇಕು. ಸರಿಯಾದ ಸಮಯಕ್ಕೆ ನಿದ್ರೆ ಮಾಡುವುದನ್ನು ರೂಢಿಸಿಕೊಳ್ಳಬೇಕು. ಮಧುಮೇಹವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಆದರೆ ಜೀವನ ಶೈಲಿಯನ್ನು ಉತ್ತಮ ರೀತಿಯಲ್ಲಿ ಬದಲಾವಣೆ ಮಾಡಿಕೊಂಡರೆ ಅದನ್ನು ನಿಯಂತ್ರಣಕ್ಕೆ ತರಬಹುದು ಹಾಗೂ ಆರೋಗ್ಯವಂತರಾಗಿರಬಹುದು’ ಎಂದು ಸಲಹೆ ನೀಡಿದರು. ಉಪ ಪ್ರಾಂಶುಪಾಲರಾದ ಪ್ರೊ.ಎಂ.ಎಸ್.ಭಾರತಿ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕಿ ನಯನಾ ತಮ್ಮಯ್ಯ, ಎನ್ಎಸ್ಎಸ್ ಅಧಿಕಾರಿಗಳಾದ ಎಂ.ಎ.ಕುಶಾಲಪ್ಪ, ಪೂಜಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-51-870756952

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.