ಗೋಣಿಕೊಪ್ಪಲು: ಕುಟ್ಟದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಕುಟ್ಟ ಭಾಗದಲ್ಲಿ ಶತಮಾನಗಳಿಂದ ಪರಿಶಿಷ್ಟ ಪಂಗಡದ ನೂರಾರು ಕುಟುಂಬಗಳು ವಾಸಿಸುತ್ತಿವೆ. ಇಲ್ಲಿಯ ಮಕ್ಕಳು ಆಧುನಿಕ ಸೌಲಭ್ಯಗಳೊಂದಿಗೆ ಉತ್ತಮ ವ್ಯಾಸಂಗ ಮಾಡಲು ಸರ್ಕಾರ ಅನೇಕ ಸವಲತ್ತು ಕಲ್ಪಿಸುತ್ತಿದೆ. ಇದರ ಸದುಪಯೋಗವನ್ನು ಸಮಾಜದ ಎಲ್ಲ ಮಕ್ಕಳು ಪಡೆದುಕೊಳ್ಳಬೇಕೆಂದು ಎಂದರು.

ನೂತನ ಕಟ್ಟಡ ಕಾಮಗಾರಿಗೆ ₹1.56 ಕೋಟಿ ಅನುದಾನ ಒದಗಿಸಿದ್ದು, ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಮಂಡೆಪಂಡ ಸುಜಾ ಕುಶಾಲಪ್ಪ, ಮಾಜಿ ಸದಸ್ಯೆ ಶಾಂತೆಯಂಡ ವೀಣ ಅಚ್ಚಯ್ಯ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ಹಿರಿಯರಾದ ಪೆಮ್ಮಂಡ ಪೊನ್ನಪ್ಪ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಕುಟ್ಟ ವಲಯ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಮುಖಂಡರಾದ ಮುಕ್ಕಾಟೀರ ನವೀನ್ ಅಯ್ಯಪ್ಪ, ಯುವ ಕಾಂಗ್ರೆಸ್ನ ಫಾರ್ದಿನ್, ಕೆ.ಬಾಡಗ ವಲಯ ಕಾಂಗ್ರೆಸ್ ಅಧ್ಯಕ್ಷ ಚಿಮ್ಮಣಮಾಡ ರವಿ, ನಾಲ್ಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ತೀತಿರ ಕಟ್ಟಿ ಕಾರ್ಯಪ್ಪ, ಅಣ್ಣಳಮಾಡ ಹರೀಶ್ ಪೂವಯ್ಯ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲೀರ ರಶೀದ್, ಕುಂಡಚ್ಚಿರ ಮಂಜು ದೇವಯ್ಯ, ಮನು ಹಾಜರಿದ್ದರು.

ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣ

ಸರ್ಕಾರ ಸವಲತ್ತು ಸದುಪಯೋಗ ಪಡೆದುಕೊಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.