ಗೋಣಿಕೊಪ್ಪಲು: ಬಿ.ಶೆಟ್ಟಿಗೇರಿಯಲ್ಲಿ ತಾಲ್ಲೂಕು ಪಂಚಾಯಿತಿ ಇಒ ಅವರ ಹೆಸರಿನಲ್ಲಿರುವ 6 ಎಕರೆ ಸರ್ಕಾರಿ ಭೂಮಿಯನ್ನು ಬಡವರಿಗೆ ಮನೆ ನಿರ್ಮಿಸಿಕೊಳ್ಳಲು ಹಂಚಬೇಕು ಎಂದು ನಿವೇಶನ ರಹಿತ ಕೂಲಿ ಕಾರ್ಮಿಕರು 9 ದಿನಗಳಿಂದ ಬಿ.ಶೆಟ್ಟಿಗೇರಿ ಪೈಸಾರಿಯಲ್ಲಿ ಗುಡಿಸಲು ನಿರ್ಮಿಸಿಕೊಂಡು ಪ್ರತಿಭಟನೆ ನಡೆಸಿದರು.

ಜಿಲ್ಲಾ ಡಿಎಸ್ಎಸ್ ಸಂಚಾಲಕ ಎಚ್.ಆರ್. ಪರಶುರಾಮ್ ಅವರ ನೇತೃತ್ವದಲ್ಲಿ ಬಾಳೆಲೆ, ದೇವರಪುರ, ತಿತಿಮತಿ, ಕೋಣನಕಟ್ಟೆ ಮೊದಲಾದ ಭಾಗದ ನಿವೇಶನರಹಿತ 130 ಬುಡಕಟ್ಟು ಕುಟುಂಬಗಳ ಸದಸ್ಯರು ಧರಣಿ ನಡೆಸುತ್ತಿದ್ದು, ಈ ಸಂಬಂಧ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿದ ಎಚ್.ಆರ್. ಪರಶುರಾಮ್ ಮತ್ತು ಬುಡುಕಟ್ಟು ಸಮುದಾಯದ ಮುಖಂಡರು ಖಾಲಿ ಇರುವ ಜಾಗದಲ್ಲಿ ಕನಿಷ್ಠ ಮನೆ ನಿರ್ಮಿಸಿಕೊಳ್ಳಲು ನಿವೇಶನ ನೀಡಬೇಕು’ ಎಂದು ಮನವಿ ಮಾಡಿಕೊಂಡರು.

ಮನವಿ ಆಲಿಸಿದ ಪೊನ್ನಣ್ಣ ಈ ಬಗ್ಗೆ ಪರಿಶೀಲಿಸಲಾಗುವುದು. ಏ.17ರಂದು ಮುಖ್ಯಮಂತ್ರಿ ಜಿಲ್ಲೆಗೆ ಆಗಮಿಸುತ್ತಿದ್ದು, ಅವರದೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.

ಪೊನ್ನಂಪೇಟೆ ತಹಶೀಲ್ದಾರ್ ತಾಲ್ಲೂಕು ಪಂಚಾಯಿತಿ ಇಒ ಕೊಣಿಯಂಡ ಅಪ್ಪಣ್ಣ, ಐಟಿಡಿಪಿ ಅಧಿಕಾರಿ ತೇಜಸ್ ಸ್ಥಳಕ್ಕೆ ಭೇಟಿ ನೀಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-1042113753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.