ಗೋಣಿಕೊಪ್ಪಲು: ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ ನೀಗಿಸುವುದಕ್ಕಾಗಿ ಶಾಸಕ ಎ.ಎಸ್.ಪೊನ್ನಣ್ಣ ತಮ್ಮ ಸ್ವಂತ ವೆಚ್ಚದಲ್ಲಿ ನೀರಿನ ಟ್ಯಾಂಕರ್ ಒದಗಿಸಿದ್ದಾರೆ.

ಮಳೆಗಾಲದಲ್ಲಿ ಧೋ ಎಂದು ಸುರಿಯುವ ಪೊನ್ನಂಪೇಟೆ ಪಟ್ಟಣಕ್ಕೆ ಪ್ರತಿ ಬೇಸಿಗೆಯಲ್ಲಿ ನೀರಿನ ಸಮ್ಯಸೆ ಎದುರಾಗುತ್ತಿದೆ. ಈ ಸಮಸ್ಯೆ ನೀಗಿಸುವುದಕ್ಕಾಗಿ ₹28 ಲಕ್ಷ ವೆಚ್ಚದಲ್ಲಿ ನೀರಿನ ಟ್ಯಾಂಕರ್ ಒದಗಿಸಿ ಸಾರ್ವಜನಿಕರಿಗೆ ನೀರು ಒದಗಿಸುತ್ತಿದ್ದಾರೆ.

ಪೊನ್ನಂಪೇಟೆ ಪಟ್ಟಣ ಪಂಚಾಯಿತಿಗೆ ನೂತನವಾಗಿ ಒದಗಿಸಿರುವ ಟ್ಯಾಂಕರ್ಗೆ ಚಾಲನೆ ನೀಡಿ ಮಾತನಾಡಿದ ಪೊನ್ನಣ್ಣ, ಶುದ್ಧ ನೀರನ್ನು ಪೂರೈಸಿ ಜನತೆಗೆ ತೊಂದರೆ ಯಾಗದಂತೆ ನೋಡಿಕೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯರು ಮತ್ತು ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಉಪಾಧ್ಯಕ್ಷ ಅಲೀರ ರಶೀದ್, ಪೊನ್ನಂಪೇಟೆ ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಮೀದಿರೀರ ನವೀನ್, ಮುಖಂಡರಾದ ಜುನೈದ್, ಮೂಕಳೇರ ಕುಶಾಲಪ್ಪ, ಜಿಮ್ಮಿ ಅಣ್ಣಯ್ಯ, ಕೊಲ್ಲೀರ ಬೋಪಣ್ಣ, ಅಜ್ಜಿಕುಟ್ಟೀರ ಪೊನ್ನು, ಗಿರೀಶ್, ಮನು, ಮಚ್ಚಮಾಡ ಮನು, ಸಿದ್ದು ನಾಚಪ್ಪ ಅನೀಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-51-349733265

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.