ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಶಾಲನಗರ: ಸರ್ಕಾರಿ ಕಾಲೇಜಿಗೆ ಪ್ರವೇಶಾತಿ ಆರಂಭ

Published 13 ಏಪ್ರಿಲ್ 2024, 13:51 IST
Last Updated 13 ಏಪ್ರಿಲ್ 2024, 13:51 IST
ಅಕ್ಷರ ಗಾತ್ರ

ಕುಶಾಲನಗರ: ಪಟ್ಟಣದ ಹಾರಂಗಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ 2024-25ನೇ ಸಾಲಿಗೆ ಪ್ರಥಮ ಬಿ.ಎ. ಬಿ.ಕಾಂ, ಬಿಸಿಎ, ಮತ್ತು ಬಿಬಿಎ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಏ. 20ರಿಂದ ಕಾಲೇಜಿನ ಕಚೇರಿ ವೇಳೆಯಲ್ಲಿ ಅರ್ಜಿ ಪಡೆದು ಪ್ರವೇಶ ಪಡೆಯಬಹುದು.

ಕಾಲೇಜಿನಲ್ಲಿ ಎಲ್ಲಾ ವಿಷಯಗಳಿಗೂ ಪೂರ್ಣಕಾಲಿಕ ಅಧ್ಯಾಪಕರು, ಗ್ರಂಥಪಾಲಕರು, ದೈಹಿಕ ಶಿಕ್ಷಣ ನಿರ್ದೇಶಕರು ಇದ್ದು, ಸರ್ಕಾರದ ಸೌಲಭ್ಯಗಳಾದ ಶುಲ್ಕ ವಿನಾಯಿತಿ, ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಸ್ಟೆಲ್ ವ್ಯವಸ್ಥೆ ಲಭ್ಯವಿದೆ.

ಇದರೊಂದಿಗೆ ಡಿಜಿಟಲ್ ಗ್ರಂಥಾಲಯ, ಸುಸಜ್ಜಿತವಾದ ಕ್ರೀಡಾ ಮೈದಾನ, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮರಾ, ಮನೋರಂಜನ ಕಾರ್ಯಕ್ರಮಗಳ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 94804 48000, 96635 57448, 98448 97554 ಅನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರ ಬಿ.ಎಂ.ಪ್ರವೀಣ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT