ಗೋಣಿಕೊಪ್ಪಲು: ಮಾಯಮುಡಿ ಗ್ರಾಮ ಪಂಚಾಯಿತಿಯ 2ನೇ ಅವಧಿಗೆ ಅಧ್ಯಕ್ಷರಾಗಿ ಆಪಟ್ಟೀರ ಟಾಟು ಮೊಣ್ಣಪ್ಪ, ಉಪಾಧ್ಯಕ್ಷರಾಗಿ ಪಿ.ಎಸ್.ಶಾಂತ ಗುರುವಾರ ಅವಿರೋಧವಾಗಿ ಆಯ್ಕೆಯಾದರು.
ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ 4ನೇ ಬಾರಿಗೆ ಸದಸ್ಯರಾಗಿದ್ದ ಟಾಟು ಮೊಣ್ಣಪ್ಪ, 2ನೇ ಬಾರಿಗೆ ಸದಸ್ಯರಾಗಿದ್ದ ಶಾಂತ ಅವರನ್ನು ಎಲ್ಲ ಸದಸ್ಯರೂ ಸರ್ವಾನುಮತದಿಂದ ಆಯ್ಕೆ ಮಾಡಿದರು.
ಚುನಾವಣಾಧಿಕಾರಿಯಾಗಿ ಪೊನ್ನಂಪೇಟೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್ ಕಾರ್ಯನಿರ್ವಹಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ, ಸದಸ್ಯರಾದ ಎಂ.ಪೀ.ಮೀನಾ, ಕೆ.ವಿ.ಸುಮಿತ್ರಾ, ವಿಠಲ ನಾಚಯ್ಯ, ಶಭರಿಷ್, ವಲಯ ಕಾಂಗ್ರೆಸ್ ಅಧ್ಯಕ್ಷ ಸಿ.ಕೆ.ಚಿಣ್ಣಪ್ಪ, ಸಣ್ಣುವಂಡ ವಿಶ್ವನಾಥ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.